ಬೆಂಗಳೂರು: ಬೆಂಗಳೂರಿನ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಕಾಫಿ ಶಾಪ್ ವಾಶ್ ರೂಂನಲ್ಲಿ ಮೊಬೈಲ್ ಕ್ಯಾಮರಾ ಆನ್ ಮಾಡಿಟ್ಟಿದ್ದ ಆರೋಪಿಯನ್ನು ಸದಾಶಿವ ನಗರ ಪೊಲೀಸರು ಬಂಧಿಸಿದ್ದಾರೆ. ಮನೋಜ್ (23) ಬಂಧಿತ ಆರೋಪಿಯಾಗಿದ್ದು, ಮಹಿಳೆಯೊಬ್ಬರು ಕಾಫಿ ಶಾಪ್ ಗೆ ತೆರಳಿದ್ದರು.
ಶೌಚಾಲಯಕ್ಕೆ ಹೋದ ವೇಳೆ ಕಸದ ಬುಟ್ಟಿಯಲ್ಲಿ ಮೊಬೈಲ್ ಇರುವುದನ್ನು ಗಮನಿಸಿದ್ದರು. ಕ್ಯಾಮೆರಾ ಕಂಡೊಡನೆ ಗಾಬರಿಯಾದ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೃತ್ಯದ ಸ್ಥಳಕ್ಕಾಗಮಿಸಿದ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜತೆಗೆ ಭದ್ರಾವತಿ ಮೂಲದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಕೊಂಡಿದ್ದು ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಕಾಫಿ ಶಾಪ್ನಲ್ಲಿ ಕಾಫಿ ಮೇಕರ್ ಆಗಿದ್ದ ಎಂಬಾತನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಫೋನ್ ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.