HomePolitics Newsಕುರ್ಚಿ ಫೈಟ್ ನಿಂದ ಕರ್ನಾಟಕದಲ್ಲಿ ಆಡಳಿತ ಕುಸಿದಿದೆ: ಜಗದೀಶ್ ಶೆಟ್ಟರ್!

ಕುರ್ಚಿ ಫೈಟ್ ನಿಂದ ಕರ್ನಾಟಕದಲ್ಲಿ ಆಡಳಿತ ಕುಸಿದಿದೆ: ಜಗದೀಶ್ ಶೆಟ್ಟರ್!

For Dai;y Updates Join Our whatsapp Group

Spread the love

ಹುಬ್ಬಳ್ಳಿ:- ಕುರ್ಚಿ ಫೈಟ್‍ನಿಂದ ಕರ್ನಾಟಕದಲ್ಲಿ ಆಡಳಿತ ಕುಸಿದಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಕಾಂಗ್ರೆಸ್‍ನಲ್ಲಿ ಫೈಟ್ ಆಗುತ್ತಿದೆ. ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ. ಕಾಂಗ್ರೆಸ್ ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಈ ವಿಚಾರದಲ್ಲಿ ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಈಗ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದಿದ್ದಾರೆ.

ಕಾಂಗ್ರೆಸ್‍ನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ತಂತ್ರ ಪ್ರತಿತಂತ್ರ ಮಾಡುತ್ತಿದ್ದಾರೆ. ಬಹಳ ದಿನ ಈ ಸರ್ಕಾರ ಮುಂದುವರೆಯುವುದಿಲ್ಲ. ಡಿಕೆಶಿ ಬೇರೆಯವರಿಂದ ಸಿಎಂ ಬದಲಾವಣೆ ಬಗ್ಗೆ ಹೇಳಿಸುತ್ತಿದ್ದಾರೆ. ಇಂತಹ ಬೆಳವಣಿಗೆಯಿಂದ ಆಡಳಿತ ಸಂಪೂರ್ಣ ಕುಸಿತವಾಗಿದೆ ಎಂದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!