ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ : ಪಟ್ಟಣದ ಎಪಿಎಂಸಿ ಶಾಖೆಯ ದಿ. ಲಕ್ಷ್ಮಿ ಅರ್ಬನ್ ಕೋ-ಆಪ್ ಬ್ಯಾಂಕ್ ಲಿ ಇದರ 111ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ನಿಮಿತ್ತ ಸ್ಥಳೀಯ ಜ. ತೋಂಟದಾರ್ಯ ಕನ್ನಡ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗೆ ಕೊಡುಗೆ ನೀಡಿದ ನೀರಿನ ಸಂಸ್ಕರಣಾ ಘಟಕದ ಉದ್ಘಾಟನೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರವು ಜೂ.30ರ ಬೆಳಿಗ್ಗೆ 10.30ಕ್ಕೆ ಇಲ್ಲಿನ ಜಗದ್ಗುರು ತೋಂಟದಾರ್ಯ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನಡೆಯಲಿದೆ.
ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಟಂದ ಸಿದ್ಧರಾಮ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ.
ಪ್ರಭಾರಿ ಪ್ರಾಚಾರ್ಯ ಡಾ.ಅನಿಲ ವೈದ್ಯ ಇವರಿಂದ ಉಪನ್ಯಾಸ ನಡೆಯಲಿದೆ. ಲಕ್ಷ್ಮಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಸುಹಾಸಕುಮಾರ ಪಟ್ಟೇದ ಅಧ್ಯಕ್ಷತೆ ವಹಿಸಲಿದ್ದು, ಬ್ಯಾಂಕಿನ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಲಿದ್ದಾರೆ. ಆದ್ದರಿಂದ ಸದಸ್ಯರು, ಠೇವುದಾರರು, ಗ್ರಾಹಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಬ್ಯಾಂಕಿನ ಅಧ್ಯಕ್ಷ ಎಸ್.ಎಸ್. ಪಟ್ಟೇದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.