ದೊಡ್ಡಬಳ್ಳಾಪುರ: ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನು ದೊಡ್ಡಬೆಳವಂಗಲ ಪೊಲೀಸರು ಬಂಧೀಸಿದ್ದಾರೆ. ನರಸಪ್ಪ (65) ತೋಟದಲ್ಲಿ ಗಾಂಜಾ ಬೆಳೆದಿದ್ದ ಬಂಧಿತ ಆರೋಪಿಯಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಅಪೇಗೌಡನ ಪಾಳ್ಯ ಗ್ರಾಮದ ತೋಟದಲ್ಲೇ ಗಾಂಜಾ ಬೆಳೆದು ಮಾರಾಟ ಮಾಡ್ತಿದ್ದನು.
ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ, ಬಂಧಿತನಿಂದ ಒಂದು ಲಕ್ಷ 67500 ರು ಮೌಲ್ಯದ 16 ಕೆಜಿ 800 ಗ್ರಾಂ ಗಾಂಜಾ ವನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



