ಬೆಂಗಳೂರು:- ಓಲಾದಲ್ಲಿ ಆಟೋ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಚಾಲಕ ಕೋಪಗೊಂಡು ಯುವತಿಯನ್ನು ಅಶ್ಲೀಲವಾಗಿ ನಿಂದಿಸಿದ ಘಟನೆ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಆ್ಯಪ್ ಮೂಲಕ ಬುಕ್ ಮಾಡಿದ್ದ ರೈಡ್ ಅನ್ನು ಕ್ಯಾನ್ಸಲ್ ಮಾಡಿದ ನಂತರ ಆಟೋ ಚಾಲಕ ತನಗೆ ಕಿರುಕುಳ ನೀಡಿ, ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.
ಯುವತಿ ಮತ್ತು ಅವರ ಸ್ನೇಹಿತೆ ಇಬ್ಬರೂ ಎರಡು ಓಲಾ ಆಟೋ ಬುಕ್ ಮಾಡಿದ್ದಾರೆ. ಮೊದಲಿಗೆ ಬಂದ ಆಟೋವನ್ನು ಯುವತಿ ಹತ್ತಿದ್ದಾರೆ. ಇನ್ನೊಂದು ಆಟೋವನ್ನ ಯುವತಿ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಆಟೋ ಚಾಲಕ ರೈಡ್ ಕ್ಯಾನ್ಸಲ್ ಮಾಡಿದಕ್ಕೆ ರೇಗಾಡಿದ್ದಾರೆ.
ಆಟೋ ಚಾಲಕನ ವರ್ತನೆ ವಿರುದ್ಧ ಯುವತಿ ಓಲಾ ಕಂಪನಿಗೆ ದೂರು ನೀಡಿದ್ದು, ಇದಕ್ಕೆ ‘ಎಕ್ಸ್’ ನಲ್ಲಿ ಪ್ರತಿಕ್ರಿಯಿಸಿದ ಓಲಾ, ಇದು “ಸಾಕಷ್ಟು ಆತಂಕಕಾರಿಯಾಗಿದೆ”. ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಭರವಸೆ ನೀಡಿದ್ದಾರೆ.