ಧಾರವಾಡ:- ಕಾಣೆಯಾಗಿದ್ದ 12 ವರ್ಷದ ಬಾಲಕನ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಧಾರವಾಡದಲ್ಲಿ ಜರುಗಿದೆ.
Advertisement
ತಾಲೂಕಿನ ನರೇಂದ್ರ ಗ್ರಾಮದ ದ್ಯಾಮಡ್ಡಿ ಕೆರೆಯಲ್ಲಿ 12 ವರ್ಷದ ಮೈಲಾರ ಹುಲಮನಿ ಎಂಬ ಬಾಲಕನ ಶವ ಪತ್ತೆ ಆಗಿದೆ. ಮಂಗಳವಾರ ಮೈಲಾರ ಮನೆಯಿಂದ ಬಾಲಕ ನಾಪತ್ತೆಯಾಗಿದ್ದ. ಆತನಿಗಾಗಿ ಹುಡುಕಾಟ ಸಹ ನಡೆಸಲಾಗಿತ್ತು. ಆದರೆ, ನಿನ್ನೆ ಬೆಳಗಿನ ಜಾವ ಬಾಲಕ ಮೈಲಾರ, ನರೇಂದ್ರ ಗ್ರಾಮದ ದ್ಯಾಮಡ್ಡಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಬಾಲಕನ ಶವವನ್ನು ಹೊರತೆಗೆದು ದೂರು ದಾಖಲಿಸಿಕೊಂಡಿದ್ದಾರೆ.