ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಬುಧವಾರ ಶಿರಹಟ್ಟಿ ಕಡೆಯಿಂದ ಬೆಳ್ಳಟ್ಟಿಗೆ ತೆರಳುತ್ತಿದ್ದ ಸಾರಿಗೆ ಇಲಾಖೆಯ ಬಸ್ ಮಧ್ಯಾಹ್ನ 1.30ರ ಸುಮಾರಿಗೆ ವರವಿ ಕ್ರಾಸ್ ಸಮೀಪ ಪಲ್ಟಿಯಾದ ಘಟನೆ ನಡೆದಿದೆ.
ಬಸ್‌ನಲ್ಲಿ ಸುಮಾರು 48 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮೂವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಭೇಟಿ ನೀಡಿ ಪರಿಶೀಲಿಸಿದರು. ತಕ್ಷಣವೇ ಗಾಯಗೊಂಡವರನ್ನು 108 ಅಂಬ್ಯುಲೆನ್ಸ್ ಮೂಲಕ ತಾಲೂಕಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕಲ್ಪಿಸಲಾಗಿದೆ.



