ಚಿತ್ರದುರ್ಗದಲ್ಲಿ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ, ಪ್ರಯಾಣಿಕರಿಗೆ ಗಾಯ!

0
Spread the love

ಚಿತ್ರದುರ್ಗ:– ಜಿಲ್ಲೆಯ ಚಳ್ಳಕೆರೆ ಪಟ್ಟಣದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ಹೊಡೆದಿದೆ.

Advertisement

ಘಟನೆಯಲ್ಲಿ ಸುಮಾರು 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ ಮೊಳಕಾಲ್ಮೂರಿನಿಂದ ಚಳ್ಳಕೆರೆಗೆ ಬರುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಅತಿವೇಗದ ಚಾಲನೆ ಹಾಗೂ ಚಾಲಕನ ಅಜಾಗರೂಕತೆಯ ಪರಿಣಾಮ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆಯ ಡಿವೈಡರ್‌ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ 10 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here