ಬೆಳಗಾವಿ: ಆದಾಯ 1.20 ಲಕ್ಷ ಇರೋರಿಗೆ, ತೆರಿಗೆ ಕಟ್ಟೋರಿಗೆ ಮಾತ್ರ ಕಾರ್ಡ್ ರದ್ದು ಆಗಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಆರಂಭಗೊಂಡಿದೆ. ಈ ವೇಳೆ ವಿಧಾನ ಪರಿಷತ್ ಕಲಾಪದಲ್ಲಿ ರೇಷನ್ ಕಾರ್ಡ್ ಹಂಚಿಕೆಯಲ್ಲಿ ಗೊಂದಲ ಆಗಿದೆ.
ಅನೇಕ ಜನರ ರೇಷನ್ ಕಾರ್ಡ್ ರದ್ದು ಆಗಿದೆ. ಈ ಗೊಂದಲ ಸರಿ ಮಾಡಿ, ಮಾಹಿತಿ ಪ್ರಕಾರ 25 ಲಕ್ಷ ರೇಷನ್ ಕಾರ್ಡ್ ರದ್ದು ಆಗಿದೆ ಎಂದು ಜೆಡಿಎಸ್‌ನ ತಿಪ್ಪೇಸ್ವಾಮಿ ಆರೋಪ ಮಾಡಿದ್ದಾರೆ. ಇದಕ್ಕೆ ಉತ್ತರ ನೀಡಿದ ಸಚಿವ ಮುನಿಯಪ್ಪ, ಆಹಾರ ಭದ್ರತಾ ಕಾಯ್ಡೆ ಯುಪಿಎ ಸರ್ಕಾರ ಜಾರಿ ಮಾಡಿತು. ಕರ್ನಾಟಕದಲ್ಲಿ 2014 ಎಲ್ಲಿ ಜಾರಿ ಆಯ್ತು? BPL, APL ಕಾರ್ಡ್‌ಗಳು ಸೇರಿ ಒಟ್ಟು 1,53,64,648 ಕಾರ್ಡ್ ಗೆ ರೇಷನ್ ಕೊಡ್ತಿದ್ದೇವೆ.
ಒಟ್ಟು 5,29,01,752 ಫಲಾನುಭವಿಗಳಿಗೆ ರೇಷನ್ ಕೊಡಲಾಗ್ತಿದೆ. BPL ಕಾರ್ಡ್ ಗಳನ್ನ ರದ್ದು ಮಾಡಿಲ್ಲ. ಆದಾಯ 1.20 ಲಕ್ಷ ಇರೋರಿಗೆ, ತೆರಿಗೆ ಕಟ್ಟೋರಿಗೆ ಮಾತ್ರ ಕಾರ್ಡ್ ರದ್ದು ಆಗಿದೆ. ಉಳಿದ ಯಾರಿಗೂ ಕಾರ್ಡ್ ರದ್ದು ಮಾಡೊಲ್ಲ ಅಂತ ಭರವಸೆ ನೀಡಿದ್ದಾರೆ.