ಚಿಕ್ಕಮಗಳೂರು: ಕೇಸ್ ನನಗೆ ಹೊಸದಲ್ಲ, ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಕೇಸ್ ನನಗೆ ಹೊಸದಲ್ಲ, ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ. ನೀವು ಕಲ್ಲು ಹೊಡೆದು, ತೊಡೆ ತಟ್ಟಿ, ಪೆಟ್ರೋಲ್ ಬಾಂಬ್ ಹಾಕಿದ್ರೆ, ಸಹಿಸುವ ಕಾಲ ಮುಗಿದಿದೆ ಎಂದಿದ್ದೆ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಹೇಳಿದ್ದೆ, ಪ್ರೀತಿಗೆ ಪ್ರೀತಿ-ಕಲ್ಲಿಗೆ ಕಲ್ಲು ಎಂದಿದ್ದೆ.
ನನ್ನ ಹೇಳಿಕೆಗೆ ಇಂದಿಗೂ ನಾನು ಬದ್ಧ. ಶಿವನ ನೆಲದಲ್ಲಿ ಅಲ್ಲಾ ಒಬ್ಬನೇ ಅಂತ ಅಂದ್ರೆ ಉಳಿದ ದೇವರ ಅಸ್ತಿತ್ವ ಏನು? ಅಂತ ಪ್ರಶ್ನೆ ಮಾಡಿದ್ದಾರೆ. ಕೆಲವರು ನಾನು ಹಿಂದೂ ಅಂತಾರೆ, ನಾಮ ಹಾಕ್ಕೊಂಡ್, ನಾಮ ಅಳಿಸಿ ಟೋಪಿ ಹಾಕಿ ನಮಾಜ್ ಮಾಡೋದು. ಇಂತಹ ತಾರಾತಕಡಿ, ನಾಟಕದ ಜಾಯಮಾನದವನು ನಾನಲ್ಲ. ನನ್ನ ರಕ್ತ ಪ್ಯೂರ್ ಹಿಂದುತ್ವ, ಬೆರಕೆ ಅಲ್ಲ ಅಂತ ʻಕೈʼ ನಾಯಕರಿಗೆ ತಿರುಗೇಟು ನೀಡಿದ್ದಾರೆ.



