ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕರ್ನಾಟಕ ರಾಜ್ಯ ಪ್ರತಿನಿಧಿಸುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಕರ್ನಾಟಕದ ಜನತೆಗೆ ನಿರಾಸೆ ಮೂಡಿಸಿದೆ. ಅದರಲ್ಲೂ ಉತ್ತರ ಕರ್ನಾಟಕದ ಜನರ ನೀರಾವರಿ, ರಸ್ತೆ, ಶಿಕ್ಷಣ, ಕೃಷಿ, ಆರೋಗ್ಯ ಕ್ಷೇತ್ರದ ಬಗ್ಗೆ ಇಟ್ಟುಕೊಂಡಿದ್ದ ನಿರೀಕ್ಷೆಗಳು ಹುಸಿಯಾಗಿವೆ ಎಂದು ಕಾಂಗ್ರೆಸ್ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಪ್ರತಿಕ್ರಿಯಿಸಿದ್ದಾರೆ.
ಈ ಭಾಗದ ಸಂಸದರು ರಾಜ್ಯದ ಮತ್ತು ತಾವು ಪ್ರತಿನಿಧಿಸುವ ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಇದ್ದ ನಿರೀಕ್ಷೆಗಳು ಸಂಪೂರ್ಣ ಹುಸಿಯಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.



