ವಿಜಯಸಾಕ್ಷಿ ಸುದ್ದಿ, ಮುಳಗುಂದ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಬಡವರ ಬಗ್ಗೆ ಕಾಳಜಿ ವಹಿಸದೇ ಕಾಲಹರಣ ಮಾಡಿದೆ. ಈ ಬಾರಿ ಕಾಂಗ್ರೆಸ್ ಪರವಾಗಿ ಮತದಾರರು ಒಲವು ತೋರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಹೆಚ್ಚು ಮತಗಳಿಂದ ಆಯ್ಕೆ ಮಾಡಬೇಕು ಎಂದು ಸಚಿವ ಎಚ್.ಕೆ. ಪಾಟೀಲ ವಿನಂತಿಸಿದರು.
ಅವರು ಪಟ್ಟಣದಲ್ಲಿ ಹಾವೇರಿ-ಗದಗ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಪ್ರಚಾರಾರ್ಥವಾಗಿ ರೋಡ್ ಶೋ ನಡೆಸಿ, ನಂತರ ಗಾಂಧಿಕಟ್ಟೆ ಆವರಣದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ನಮ್ಮ ಕಾಂಗ್ರೆಸ್ ಸರಕಾರ ಯಾವಾಗಲೂ ಬಡವರ, ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಪಕ್ಷವಾಗಿದ್ದು, ಈ ಬಾರಿ ನನ್ನನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುವ ಅವಕಾಶವನ್ನು ಕೊಡಿ ಎಂದರು.
ಮಾಜಿ ಶಾಸಕ ಡಿ.ಆರ್. ಪಾಟೀಲ್, ಮುಳಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಸುಂಕಾಪೂರ, ಎಸ್.ಎಂ. ನೀಲಗುಂದ, ಎಂ.ಡಿ. ಬಟ್ಟೂರ, ಅಶೋಕ ಸೊನಗೋಜಿ, ಬಸವರಾಜ ಬಾತಾಖಾನಿ, ಎಸ್.ಸಿ. ಬಡ್ನಿ, ಎನ್.ಆರ್. ದೇಶಪಾಂಡೆ, ಕೆ.ಎಲ್. ಕರಿಗೌಡರ, ಬಸವರಾಜ ವಾಲಿ, ಮಾಹಾಂತಪ್ಪ ನೀಲಗುಂದ, ಮಾಹಾದೇವಪ್ಪ ಗಡಾದ, ವಿಜಯ ನೀಲಗುಂದ, ಇಮಾಮಸಾಬ ಶೇಖ, ಪಾರವ್ವ ಅಳ್ಳಣ್ಣವರ ಇದ್ದರು.