HomeGadag Newsಸಮಾಜದ ಸ್ವಚ್ಛತೆ ನಮ್ಮೆಲ್ಲರ ಜವಾಬ್ದಾರಿ

ಸಮಾಜದ ಸ್ವಚ್ಛತೆ ನಮ್ಮೆಲ್ಲರ ಜವಾಬ್ದಾರಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಗದಗ, ಕೆ.ಸಿ.ಸಿ. ಬ್ಯಾಂಕ್ ಧಾರವಾಡ, ಕೆ.ಎಂ.ಎಫ್ ಧಾರವಾಡ ಹಾಗೂ ಗದಗ ಜಿಲ್ಲೆಯ ಸಹಕಾರ ಸಂಘ/ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ-2025ರ ಅಂಗವಾಗಿ `ಸಹಕಾರದಿಂದ ಸ್ವಚ್ಛತಾ ಅಭಿಯಾನ’ ಕಾರ್ಯಕ್ರಮ ಕೆ.ಸಿ.ಸಿ. ಬ್ಯಾಂಕ್ ಹಿಂಭಾಗದ ಆವರಣದಲ್ಲಿ ಜರುಗಿತು.

ಕೆ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಂ.ಎಫ್. ಕಲಗುಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಹಕಾರದಿಂದ ಸ್ವಚ್ಛತೆ ಅಭಿಯಾನ ಕಾರ್ಯಕ್ರಮವನ್ನು ಇಂದು ಆಯೋಜಿಸಿದ್ದು, ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಜಿಲ್ಲೆಯಲ್ಲಿರುವ ಎಲ್ಲಾ ಸಹಕಾರ ಸಂಘಗಳು ತಮ್ಮ ಸಂಸ್ಥೆಗಳು ಹಾಗೂ ಸರ್ಕಾರಿ ರಸ್ತೆ, ಆಟದ ಮೈದಾನ, ಉದ್ಯಾನವನ ಹಾಗೂ ಗ್ರಾಮ ಪಂಚಾಯತದAತಹ ವಿವಿಧ ಸ್ಥಳಗಳಲ್ಲಿ ವರ್ಷಾದ್ಯಂತ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಸ್.ಕೆ. ಕುರಡಗಿ, ಮರ್ಚಂಟ್ಸ್ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎಸ್. ಚಟ್ಟಿ, ಸಹಕಾರ ಸಂಘಗಳ ಉಪನಿಬಂಧಕಿ ಎಸ್.ಎಸ್. ಕಬಾಡೆ, ರೋಣ, ಶಿರಹಟ್ಟಿ, ಮತ್ತು ನರಗುಂದ ತಾಲೂಕಿನ ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಪ್ರಶಾಂತ ಮುಧೋಳ, ಕೆ.ಸಿ. ಕೂಸನೂರಮಠ, ಪ್ರಕಾಶ ನವಲಗುಂದ, ಕೆ.ಸಿ.ಸಿ. ಬ್ಯಾಂಕ್ ಗದಗ ಮ್ಯಾನೇಜರ್ ಆರ್.ಎಸ್. ಕಟ್ಟಿ, ಪ್ರಭಾರ ಜಿಲ್ಲಾ ನಿಯಂತ್ರಣಾಧಿಕಾರಿ ಎಸ್.ವ್ಹಿ. ಚಳಗೇರಿ, ಧಾರವಾಡ ಹಾಲು ಒಕ್ಕೂಟದ ಜಿಲ್ಲಾ ಮುಖ್ಯಸ್ಥ ಡಾ. ಪ್ರಸನ್ನ ಪಟ್ಟೇದ ಮುಂತಾದವರು ಉಪಸ್ಥಿತರಿದ್ದರು.

ತರಬೇತಿ ಕಾರ್ಯಾಗಾರದಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯಸ್ಥಾರಾದ ಬಸವರಾಜ ಮಲ್ಲಾಪೂರ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಸ್ವಚ್ಛತೆ, ನೈರ್ಮಲ್ಯ, ಮಾಲಿನ್ಯ, ಪರಿಸರ ಕಾಪಾಡುವಲ್ಲಿ ಪ್ರಜೆಗಳ ಪಾತ್ರ, ಸಾಮಾಜಿಕ ಜವಾಬ್ದಾರಿ, ಆರೋಗ್ಯದ ಕುರಿತು ಮಾಹಿತಿಯನ್ನು ನೀಡಿದರು.

ಗದಗ ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಸ್.ಕರಿಯಪ್ಪನವರ ಸ್ವಾಗತಿಸಿ ನಿರೂಪಿಸಿದರು. ರಶೀದಾಬಾನು ಸಿ.ಯಲಿಗಾರ ವಂದಿಸಿದರು.

ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿ.ಎಂ. ಪಾಟೀಲ ಮಾತನಾಡುತ್ತಾ, ನಮ್ಮ ಮನೆಯನ್ನು ಹೇಗೆ ನಾವು ಸ್ವಚ್ಛವಾಗಿ ಇಟ್ಟುಕೊಳ್ಳುತ್ತೇವೆಯೋ ಹಾಗೇ ನಮ್ಮ ಸಮಾಜ ಹಾಗೂ ಗ್ರಾಮವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!