ಬೆಂಗಳೂರು: ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲಾ, 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗ ಸಿಎಂ ಕುರ್ಚಿ ಖಾಲಿ ಇಲ್ಲಾ. 2028ರವರೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸಿಎಂ ಇರ್ತಾರೆ.
2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ರೇಸ್ ಶುರುವಾದಾಗ ಪ್ಲೇಯರ್ ಆಯ್ಕೆ ಮಾಡ್ತಾರೆ. ಆ ರೀತಿಯ ಸನ್ನಿವೇಶ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಅಧ್ಯಕ್ಷರು ನೀವೆಲ್ಲಾ ಆಕ್ಟೀವ್ ಆಗಿ, ಪಕ್ಷ ಕಟ್ಟಿ ಎಂದಿದ್ದಾರೆ ಎಂದು ಹೇಳಿದ್ದಾರೆ.
ಸಿಎಂ ಆಕಾಂಕ್ಷಿ ಎಂದು ಪರಮೇಶ್ವರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಯಾವುದು ಕೂಡ ಚರ್ಚೆ ಆಗಿಲ್ಲ. ದಲಿತ ಸಿಎಂ ರೇಸ್ ಬಗ್ಗೆಯೂ ಚರ್ಚೆ ಆಗಿಲ್ಲ. ಡಿನ್ನರ್ ಮೀಟಿಂಗ್ ವಿಚಾರ ಮಾತನಾಡಿಲ್ಲ. ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ನೀತಿಗೆ ಜನ ಬೆಂಬಲ ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.


