ಬೆಂಗಳೂರು: ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕೊಡಲು ಹೊರಟಿದ್ದಾರೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಅವಕಾಶ ಇಲ್ಲ. ಇದನ್ನು ವಿಧಾನಸಭೆಯಲ್ಲಿ ಸರ್ಕಾರದ ಗಮನಕ್ಕೆ ತರುತ್ತೇವೆ. ಈ ನಿರ್ಧಾರ ಕೈಬಿಡದಿದ್ದರೆ ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.
ಉತ್ತರ ಕರ್ನಾಟಕದ ನೀರಾವರಿ ಯೋಜನೆ ಬಗ್ಗೆ ಬಜೆಟ್‌ನಲ್ಲಿ ಚರ್ಚೆ ಆಗಿಲ್ಲ. ಕೃಷ್ಣೆಗೆ ಮೋಸ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ನೀರಾವರಿ ಬಗ್ಗೆ ಯಾವ ಚರ್ಚೆ ಆಗಿಲ್ಲ. ಒಂದೇ ಸಾಲಲ್ಲಿ ಬಜೆಟ್ ಬಗ್ಗೆ ಹೇಳ್ಬೇಕು ಅಂದ್ರೆ, ಇದು ಸಾಬ್ರ ಬಜೆಟ್, ಪಾಕಿಸ್ತಾನದ ಬಜೆಟ್ ಎಂದು ವ್ಯಂಗ್ಯವಾಡಿದ್ದಾರೆ.



