HomeUncategorizedಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆ ಮೂಡಿಸಿದ ಪರಿಷತ್ತು

ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆ ಮೂಡಿಸಿದ ಪರಿಷತ್ತು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಭಾಷೆ, ನೆಲ, ಜಲದ ಪ್ರಶ್ನೆ ಬಂದಾಗ ಶತಮಾನಗಳಿಂದಲೂ ಕನ್ನಡ ಸಾಹಿತ್ಯ ಪರಿಷತ್ತು ಪ್ರಭುತ್ವವನ್ನು ಎಚ್ಚರಿಸುವ ಕಾರ್ಯ ಮಾಡುತ್ತಾ ಬಂದಿದೆ. ಪುಸ್ತಕ ಪ್ರಕಟನೆಗಳ ಮೂಲಕ ಕನ್ನಡಿಗರಲ್ಲಿ ವೈಚಾರಿಕ ಪ್ರಜ್ಞೆಯನ್ನು ಬೆಳೆಸಿ ಕನ್ನಡ, ಕನ್ನಡಿಗ ಮತ್ತು ಕರ್ನಾಟಕತ್ವವನ್ನು ಸದಾ ಜಾಗೃತವಾಗಿಡುವ ಕೆಲಸ ಮಾಡಿದೆ. ಸಾಹಿತ್ಯ, ಸಂಸ್ಕೃತಿಯ ಮೂಲಕ ಸಾಮಾಜಿಕ ಸ್ವಾಸ್ಥ್ಯಯವನ್ನು ಕಾಪಾಡುವ ನಿಟ್ಟಿನಲ್ಲಿ ಪರಿಷತ್ತಿನ ಪಾತ್ರ ದೊಡ್ಡದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಯಲಬುರ್ಗಾದ ಉಪನ್ಯಾಸಕರಾದ ಡಾ. ನಾಗಪ್ಪ ಹೂವಿನಭಾವಿ ತಿಳಿಸಿದರು.

ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನ, ಕಸಾಪ ಕಾರ್ಯಾಲಯ ಗದಗದಲ್ಲಿ ಜರುಗಿದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಜನಸಾಮಾನ್ಯರತ್ತ ಕನ್ನಡ ಸಾಹಿತ್ಯ ಪರಿಷತ್ತು ಎಂಬ ವಿಷಯದ ಕುರಿತು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಉಮೇಶ, ಸಾಹಿತ್ಯ ಮನುಷ್ಯನನ್ನು ಮಾನವೀಯ ನೆಲೆಯಲ್ಲಿ ಚಿಂತಿಸುವಂತೆ ಮಾಡುತ್ತದೆ. ನಾಡು-ನುಡಿ ಸಂರಕ್ಷಣೆ ಹಿನ್ನೆಲೆಯಲ್ಲಿ ಪರಿಷತ್ತು ರೂಪುಗೊಂಡಿದೆ. ಜಿಲ್ಲೆಯಲ್ಲಿ ವಿವೇಕಾನಂದಗೌಡ ಪಾಟೀಲ ನೇತೃತ್ವದಲ್ಲಿ ಪರಿಷತ್ತಿನ ಚಟುವಟಿಕೆಗಳು ಕ್ರಿಯಾಶೀಲವಾಗಿ ಜರುಗುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗುರಣ್ಣ ಬಳಗಾನೂರ, ಡಾ. ಆರ್.ಎನ್. ಗೋಡಬೋಲೆ, ಶ್ರೀನಿವಾಸ ಹುಯಿಲಗೋಳ, ವಾಸಣ್ಣ ಕುರಡಗಿ, ಫಕ್ಕೀರಪ್ಪ ಹೆಬಸೂರ, ತಯ್ಯಬಅಲಿ ಹೊಂಬಳ, ಎ.ಎಸ್. ಮಕಾನದಾರ, ಎನ್.ಬಿ. ಕಳಸಾಪೂರ, ಡಾ. ರಶ್ಮಿ ಅಂಗಡಿ, ಎಸ್.ವಿ. ಗುಂಜಾಳ ಅವರನ್ನು ಸನ್ಮಾನಿಸಲಾಯಿತು.

ಡಾ. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು. ಡಾ. ರಶ್ಮಿ ಅಂಗಡಿ ಸ್ವಾಗತಿಸಿದರು. ರಕ್ಷಿತಾ ಗಿಡ್ನಂದಿ ವಂದಿಸಿದರು. ಕಾರ್ಯಕ್ರಮದಲ್ಲಿ ಚಂದ್ರಶೇಖರ ವಸ್ತ್ರದ, ಪ್ರೊ. ಕೆ.ಎಚ್. ಬೇಲೂರ, ಡಾ. ಜಿ.ಬಿ. ಪಾಟೀಲ, ಅಂದಾನಪ್ಪ ವಿಭೂತಿ, ಸಿ.ಕೆ. ಎಚ್. ಶಾಸ್ತಿç, ಡಿ.ಎಸ್. ಬಾಪುರಿ, ಪ್ರ.ತೋ. ನಾರಾಯಣಪೂರ, ಬಸವರಾಜ ವಾರಿ, ಸತೀಶ ಚನ್ನಪ್ಪಗೌಡ್ರ, ಬಿ.ಎಸ್. ಹಿಂಡಿ, ಷಡಕ್ಷರಿ ಮೆಣಸಿನಕಾಯಿ, ಅ.ದ. ಕಟ್ಟಿಮನಿ, ಶಿಲ್ಪಾ ಮ್ಯಾಗೇರಿ, ಶಕುಂತಲಾ ಗಿಡ್ನಂದಿ, ಡಾ. ಬಿ.ಎಲ್. ಚವ್ಹಾಣ, ಬಸವರಾಜ ನೆಲಜೇರಿ, ಸುರೇಶ ಕುಂಬಾರ, ವಿ.ಎಸ್. ದಲಾಲಿ, ಎಸ್.ಐ. ಯಾಳಗಿ, ಬಸವರಾಜ ಗಣಪ್ಪನವರ, ಶರಣಪ್ಪ ಹೊಸಂಗಡಿ, ಎಸ್.ಎಂ. ಕಾತರಕಿ, ಜ್ಯೋತಿ ಹೇರಲಗಿ ಮೊದಲಾದವರು ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಬರಹಗಾರರು ಸಾಕಷ್ಟು ಪ್ರಮಾಣದಲ್ಲಿ ಕೃಷಿ ಮಾಡುತ್ತಿದ್ದರೂ ಓದುಗರ ಸಂಖ್ಯೆ ತೃಪ್ತಿದಾಯಕವಾಗಿಲ್ಲ. ಈ ಹಿನ್ನೆಲೆಯಲ್ಲಿ ಓದುವ ಸಂಸ್ಕೃತಿಯನ್ನು ಬೆಳೆಸುವದು ಇಂದಿನ ಅಗತ್ಯವಾಗಿದೆ. ಕನ್ನಡದ ಉಳಿವು ಶಾಲೆಗಳನ್ನು ಅವಲಂಬಿಸಿರುವದರಿAದ ಕನ್ನಡ ಶಾಲೆಗಳ ಸಬಲೀಕರಣ ಪ್ರಥಮ ಆದ್ಯತೆಯಾಗಬೇಕು ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!