HomeSports NewsIPL ಹಬ್ಬಕ್ಕೆ ದಿನಗಣನೆ ಶುರು: RCB ಪರ ಆರಂಭಿಕ ಜೋಡಿ ಕಣಕ್ಕಿಳಿಯೋದು ಫಿಕ್ಸ್!

IPL ಹಬ್ಬಕ್ಕೆ ದಿನಗಣನೆ ಶುರು: RCB ಪರ ಆರಂಭಿಕ ಜೋಡಿ ಕಣಕ್ಕಿಳಿಯೋದು ಫಿಕ್ಸ್!

For Dai;y Updates Join Our whatsapp Group

Spread the love

ಐಪಿಎಲ್ 2025 ಮಾರ್ಚ್ 22 ರಿಂದ ಪ್ರಾರಂಭವಾಗುತ್ತಿದ್ದು, ಎಲ್ಲಾ ತಂಡಗಳು ಸಿದ್ಧತೆಗಳಲ್ಲಿ ನಿರತವಾಗಿವೆ. ಇನ್ನೂ ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಈಗಾಗಲೇ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಪ್ರಮುಖ ಆಟಗಾರರು ಆರ್​ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ.

ಅದಲ್ಲದೆ ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸುವುದು ಕನ್ಫರ್ಮ್​. ಇದನ್ನು ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಕೂಡ ಖಚಿತಪಡಿಸಿದ್ದಾರೆ. ಹೀಗಾಗಿ ಈ ಬಾರಿ ಆರ್​ಸಿಬಿ ಪರ ಕೊಹ್ಲಿ-ಸಾಲ್ಟ್ ಜೋಡಿ ಓಪನರ್​​ಗಳಾಗಿ ಕಣಕ್ಕಿಳಿಯಲಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಆ್ಯಂಡಿ ಫ್ಲವರ್, ಆರ್​ಸಿಬಿ ಪರ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸುವುದು ಬಹಳ ಮುಖ್ಯ. ಅವರ ಜೊತೆ ಈ ಬಾರಿ ಟಾಪ್ ಆರ್ಡರ್​ನಲ್ಲಿ ಫಿಲ್ ಸಾಲ್ಟ್ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಕೊಹ್ಲಿ ಹಾಗೂ ಸಾಲ್ಟ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ಯೋಜನೆ ರೂಪಿಸಿರುವುದನ್ನು ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 113 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದಾರೆ. ಈ ವೇಳೆ 8 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ 45.81ರ ಸರಾಸರಿಯಲ್ಲಿ ಒಟ್ಟು 4352 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆರಂಭಿಕ ಎನಿಸಿಕೊಂಡಿದ್ದಾರೆ.

ಮತ್ತೊಂದೆಡೆ ಫಿಲ್ ಸಾಲ್ಟ್ ಇಂಗ್ಲೆಂಡ್ ಪರ ಆರಂಭಿಕನಾಗಿ ಕಣಕ್ಕಿಳಿದ ಅನುಭವ ಹೊಂದಿದ್ದಾರೆ. ಇದರ ಜೊತೆ ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ 12 ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಇನಿಂಗ್ಸ್​ ಆರಂಭಿಸಿದ್ದರು. ಈ ವೇಳೆ 4 ಅರ್ಧಶತಕಗಳೊಂದಿಗೆ ಒಟ್ಟು 435 ರನ್ ಬಾರಿಸಿ ಅಬ್ಬರಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!