ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಆಗಾಗ ಭಾರಿ ಚರ್ಚೆಗೆ ಗ್ರಾಸವಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ವರದಿಗೆ ಕೊನೆಗೂ ಮೋಕ್ಷ ಸಿಗುವ ಲಕ್ಷಣ ಕಾಣುತ್ತಿದೆ. ಹೌದು ಜಾತಿಗಣತಿ ವರದಿ ಸ್ವೀಕಾರ ಮಾಡಬೇಕೋ, ಬೇಡವೋ ಎಂಬುದರ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲು ಕೌಂಟ್ ಡೌನ್ ಶುರುವಾಗಿದ್ದು,
Advertisement
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸೌಧಕ್ಕೆ ಆಗಮಿಸಿದ್ದು ಸಂಪುಟ ಸಭೆ ನಡೀತಿದೆ. ಇನ್ನು ಸಾಮಾಜಿಕ-ಶೈಕ್ಷಣಿಕ ಸಮೀಕ್ಷಾ ವರದಿ ಅಂದರೆ ಜಾತಿ ಗಣತಿ ವರದಿಯ ಪ್ರತಿಗಳು ವಿಧಾನಸೌಧಕ್ಕೆ ಆಗಮಿಸಿವೆ.
ಮುಚ್ಚಿದ ಲಕೋಟೆಯಲ್ಲಿ ವಿಧಾನಸೌಧಕ್ಕೆ ಜಾತಿಗಣತಿ ವರದಿಯನ್ನು ತರಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವರದಿ ತಯಾರಿಸಲಾಗಿದ್ದು ಸಚಿವ ಸಂಪುಟದ ಕೊಠಡಿಗೆ ತೆಗೆದುಕೊಂಡು ಹೋಗಲಾಗಿದೆ.