ತಾಯಿ ಮೇಲೆ ಪಲ್ಟಿಯಾಗಿದ್ದ ಆಟೋ ಎತ್ತಿದ ಮಗಳು: ಬಾಲಕಿಯ ಶೌರ್ಯ ಧೈರ್ಯಕ್ಕೆ ಸಿದ್ದರಾಮಯ್ಯ ಫಿದಾ!

0
Spread the love

ಬೆಂಗಳೂರು:- ಅಮ್ಮನನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಯ ಶೌರ್ಯವನ್ನು CM ಸಿದ್ದರಾಮಯ್ಯ ಮೆಚ್ಚಿದ್ದಾರೆ.

Advertisement

ಈ ಬಗ್ಗೆ ಟ್ವೀಟ್​ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವಿಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here