HomePolitics Newsಡಿಕೆಶಿ ಗುಂಪು ರಾಜಕೀಯ ಮಾಡುವವರಲ್ಲ; ಹೈಕಮಾಂಡ್ ತೀರ್ಮಾನವೇ ಅಂತಿಮ - ಶಾಸಕ ಬಾಲಕೃಷ್ಣ

ಡಿಕೆಶಿ ಗುಂಪು ರಾಜಕೀಯ ಮಾಡುವವರಲ್ಲ; ಹೈಕಮಾಂಡ್ ತೀರ್ಮಾನವೇ ಅಂತಿಮ – ಶಾಸಕ ಬಾಲಕೃಷ್ಣ

For Dai;y Updates Join Our whatsapp Group

Spread the love

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಪು ಕಟ್ಟಿಕೊಂಡು ರಾಜಕೀಯ ಮಾಡುವ ವ್ಯಕ್ತಿಯಲ್ಲ. ಅವರು ಹೈಕಮಾಂಡ್‌ಗೆ ಸಂಪೂರ್ಣ ನಿಷ್ಠೆಯಿಂದಿರುವ ನಾಯಕ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಚರ್ಚೆಗೆ ಕರೆದಿರುವ ಹಿನ್ನೆಲೆಯಲ್ಲಿ ಮಹತ್ವದ ತೀರ್ಮಾನ ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಪಕ್ಷದೊಳಗಿನ ಗೊಂದಲಗಳಿಗೆ ಶೀಘ್ರ ಅಂತ್ಯವಾಗಬೇಕು. ಎಲ್ಲವೂ ಸ್ಪಷ್ಟವಾಗಬೇಕು. ಈ ವಿಚಾರಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು ಎಂದು ಮನವಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕೆಲ ಆಪ್ತ ಸಚಿವರು ದೆಹಲಿಗೆ ತೆರಳಿರುವ ಕುರಿತು ಪ್ರತಿಕ್ರಿಯಿಸಿದ ಬಾಲಕೃಷ್ಣ, “ಡಿ.ಕೆ. ಶಿವಕುಮಾರ್ ಗುಂಪು ಕಟ್ಟಿಕೊಂಡು ರಾಜಕೀಯ ಮಾಡುವವರಲ್ಲ. ಅವರು ಯಾವಾಗಲೂ ಹೈಕಮಾಂಡ್‌ಗೆ ಬದ್ಧರಾಗಿರುವವರು” ಎಂದು ಹೇಳಿದರು.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಯಾರನ್ನೂ ವಿಶೇಷವಾಗಿ ಕರೆದುಕೊಂಡು ಹೋಗಿಲ್ಲ. ರಾಜಕೀಯ ಕುತೂಹಲದಿಂದ ಕೆಲ ಸಚಿವರು ಸ್ವಯಂಪ್ರೇರಿತವಾಗಿ ಹೋಗಿರಬಹುದು. ಈ ಹಿಂದೆ ಸಹ ಸಿಎಂ ದೆಹಲಿಗೆ ತೆರಳಿದಾಗ ಸಚಿವರು ಜೊತೆಯಾಗಿರುವ ಉದಾಹರಣೆಗಳಿವೆ. ಇದು ಹೊಸ ಬೆಳವಣಿಗೆ ಅಲ್ಲ ಎಂದು ಸ್ಪಷ್ಟಪಡಿಸಿದರು.

“ಪಕ್ಷದೊಳಗಿನ ಗೊಂದಲಗಳು ನಿವಾರಣೆಯಾದರೆ 2028ರ ವಿಧಾನಸಭಾ ಚುನಾವಣೆಗೆ ಅನುಕೂಲವಾಗಲಿದೆ. ನಮಗೆ ಮುಂದಿನ ಚುನಾವಣೆ ಮುಖ್ಯ. ಆದರೆ ನಾವು ಮಾತನಾಡಿದ ಕೂಡಲೇ ಏನೂ ಆಗುವುದಿಲ್ಲ. ಅನಗತ್ಯ ಗೊಂದಲ ಸೃಷ್ಟಿಯಾಗಬಾರದು. ಹೈಕಮಾಂಡ್‌ಗೆ ಎಲ್ಲ ವಿಚಾರಗಳೂ ಗೊತ್ತಿವೆ. ಅಂತಿಮವಾಗಿ ಅವರ ತೀರ್ಮಾನವೇ ಪಕ್ಷಕ್ಕೆ ಮಾನ್ಯ” ಎಂದು ಬಾಲಕೃಷ್ಣ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!