ಹಾಸನ: ವರ್ಷಕ್ಕೆ ಒಂದು ಬಾರಿಯಷ್ಟೇ ದರ್ಶನ ಭಾಗ್ಯ ಕರುಣಿಸುತ್ತಿರುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ಓಪನ್ ಆಗಿದೆ. ಸಮಯ 12.21ಕ್ಕೆ ವಿದ್ಯುಕ್ತವಾಗಿ ಗರ್ಭಗುಡಿಯ ಬಾಗಿಲು ತೆರೆಯಲಾಯ್ತು. ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ತೆರೆದಿದ್ದು,
ಸಾರ್ವಜನಿಕರಿಗೆ ನಾಳೆಯಿಂದಲೇ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅಕ್ಟೋಬರ್ 22ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈ ಉತ್ಸವವು ಹಾಸನ ಜಾತ್ರೆಯ ಭಾಗವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ.
ಈ ವೇಳೆ ಆಡಿ ಚುಂಚನಗಿರಿ ಮಠದ. ಪೀಠಾಧ್ಯಕ್ಷ ನಿರ್ಮಲಾನಂದನಾಥ್ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಸನ ಡಿಸಿ ಎಸ್.ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಅಕ್ಟೊಬರ್ 23 ವೆರೆಗೆ ಹಾಸನಾಂಬೆ ದೇವಿ ಜಾತ್ರೆ ನಡೆಯಲಿದೆ.
ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬೆ ದೇವಿ ಹಲವು ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿದ್ದಾಳೆ.