ಚಾಲಕನ ನಿಯಂತ್ರಣ ತಪ್ಪಿ ಬೋಲೇರೋ ವಾಹನ ಪಲ್ಟಿ! ಇಬ್ಬರಿಗೆ ಗಂಭೀರ ಗಾಯ

0
Spread the love

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಬೋಲೇರೋ ವಾಹನ ಪಲ್ಟಿ ಹೊಡೆದು ವಾಹನ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

Advertisement

ಗಾಯಾಳುಗಳನ್ನು ಮೈಸೂರಿನ ಇಲವಾಲದವರು ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬೋಲೇರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದೆ. ವಾಹನದಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರಿಗೂ ಕೈ, ಕಾಲು ಮತ್ತು ಇತರೇ ಭಾಗಗಳಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಮದ್ದೂರು ಪೋಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here