ದೊಡ್ಡಬಳ್ಳಾಪುರ:- ಚಾಲಕನ ನಿಯಂತ್ರಣ ತಪ್ಪಿ ಕಲ್ಲಂಗಡಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಪಲ್ಟಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರದ ಮೇಷ್ಟ್ರು ಮನೆ ಸರ್ಕಲ್ ಬಳಿ ಜರುಗಿದೆ.
ಘಟನೆಯಲ್ಲಿ ಕ್ಯಾಂಟರ್ ಚಾಲಕ ವೇದಮೂರ್ತಿ (22) ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಚೆನೈನಿಂದ ದಾವಣಗೆರೆಗೆ ಕಲ್ಲಂಗಡಿ ತುಂಬಿಕೊಂಡು ಕ್ಯಾಂಟರ್ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮೂರು ಡಿವೈಡರ್ ದಾಟಿ ಹಳ್ಳಕ್ಕೆ ಬಂದು ಬಿದ್ದಿದೆ. ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕನಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.



