ಹಾಸನ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಬಾಗರಹಳ್ಳಿ ಬಳಿ ನಡೆದಿದೆ. ಜಾನೆಕೆರೆ ಗ್ರಾಮದ ಅಪ್ಪಣ್ಣ ಎಂಬುವವರಿಗೆ ಸೇರಿದ ಕಾರು ಆಗಿದ್ದು,
Advertisement
ಆನೆಮಹಲ್-ಬ್ಯಾಕರವಳ್ಳಿ ನಡುವಿನ ರಾಜ್ಯ ಹೆದ್ದಾರಿ ಬಾಗರಹಳ್ಳಿ ಸಮೀಪ ರಸ್ತೆ ಬದಿಯ ಹಳ್ಳಕ್ಕೆ ಕಾರು ಬಿದ್ದಿದೆ. ಕೂಡಲೇ ಸ್ಥಳಕ್ಕೆ ಸ್ತಳಿಯರು ಧಾವಿಸಿದ್ದಾರೆ. ಹಳ್ಳದಲ್ಲಿ ಸಿಲುಕಿಕೊಂಡಿದ್ದ ದಂಪತಿಯನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.