ಹಾಸನ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಪಲ್ಟಿಯಾದ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ನಡುರಸ್ತೆಯಲ್ಲೇ ವಾಹನ ಪಲ್ಟಿಯಾಗಿದೆ. ಗೂಡ್ಸ್ ವಾಹನ ಪಲ್ಟಿಯಾಗಿದ್ದರಿಂದ ಕೆಲಕಾಲ ಸಂಚಾರಕ್ಕೆ ಅಡ್ಡಿಯಾಗಿದ್ದು,
ಇನ್ನೂ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



