ಚಿಕ್ಕಬಳ್ಳಾಪುರ: ಬೆಂಗಳೂರಿನಿಂದ ಪುಟ್ಟಪರ್ತಿ ಕಡೆಗೆ ಹೋಗುತ್ತಿದ್ದ ಆಂಧ್ರ ಬಸ್‌ವೊಂದು ಪಲ್ಟಿಯಾಗಿದೆ. ಆಂಧ್ರ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
Advertisement
ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44 ಚೆಂಡೂರಿನ ಬಳಿ ಎಪಿಎಸ್ ಆರ್ ಸಿ ಬಸ್ ಪಲ್ಟಿಯಾಗಿದೆ. ಗಾಯಾಳುಗಳಿಗೆ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.