ಬೆಂಗಳೂರು:- ರಾಷ್ಟ್ರದಲ್ಲಿ ಚುನಾವಣಾ ಆಯೋಗ ಸರಿಯಾಗಿ ಕೆಲಸ ಮಾಡ್ತಿಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
Advertisement
ಕರ್ನಾಟಕದ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆಗಿದೆ ಅನ್ನೋ ರಾಹುಲ್ ಗಾಂಧಿ ಆರೋಪ ವಿಚಾರಕ್ಕೆ ಮಾತನಾಡಿದ ಅವರು, ಇಡೀ ದೇಶದ ಚುನಾವಣೆಯಲ್ಲಿ ಅಕ್ರಮಗಳು ನಡೆಯುತ್ತಿವೆ. ಇದನ್ನ ನಮ್ಮ ನಾಯಕ ರಾಹುಲ್ ಗಾಂಧಿ ಮಾತಾಡಿದ್ದು, ಕೇಂದ್ರ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದರು.
ರಾಹುಲ್ ಗಾಂಧಿ ಅವರು ಕರ್ನಾಟಕ ಮಾತ್ರವಲ್ಲ, ಇಡೀ ದೇಶದಲ್ಲಿ ನಡೆಯುತ್ತಿರೋ ಅಕ್ರಮದ ಬಗ್ಗೆ ಮಾತಾಡಿದ್ದಾರೆ. ಇಡೀ ರಾಷ್ಟ್ರದಲ್ಲಿ ಚುನಾವಣೆಗಳು ಸರಿಯಾಗಿ ನಡೆಯುತ್ತಿಲ್ಲ. ಚುನಾವಣಾ ಆಯೋಗ ಸರಿಯಾಗಿ ಕೆಲಸ ಮಾಡ್ತಿಲ್ಲ ಅಂತ ಆರೋಪ ಮಾಡಿದ್ದಾರೆ.