ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಬಳ್ಳಾರಿ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್ ಮಾಡುವಂತೆ ವಕೀಲರು ವಾದ ಮಾಡಿಸಲಿದ್ದಾರೆ. ಹೌದು ಹೈಕೋರ್ಟ್ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ನಟ ದರ್ಶನ್ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ಹೈಕೋರ್ಟ್ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ.
ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್ಗೆ ಎಂಆರ್ಐ ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ.