ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿತ್ತು. ಮಾರ್ಚ್ 19ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ ಇದೀಗ ಮುಂದೂಡಲ್ಪಟ್ಟಿದೆ.
ಜಾಗತಿಕ ರಾಜಕೀಯ ಅಶಾಂತಿ ಈ ನಿರ್ಧಾರದ ಪ್ರಮುಖ ಕಾರಣವಾಗಿದೆ. ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಪಶ್ಚಿಮ ಏಷ್ಯಾ ಭಾಗದಲ್ಲಿ ಉದ್ವಿಗ್ನತೆ ಉಂಟಾಗಿದೆ. ಭಾರತೀಯ ಸಿನಿಮಾಗಳಿಗೆ ಉತ್ತಮ ಮಾರುಕಟ್ಟೆಯಾಗಿರುವ ಯುಎಇ, ಕುವೈತ್, ಒಮಾನ್, ಕತಾರ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಪರಿಸ್ಥಿತಿ ಸ್ಥಿರವಾಗಿಲ್ಲ.
ಅರಬ್ ರಾಷ್ಟ್ರಗಳ ಹೊರತಾಗಿಯೂ ಅಮೆರಿಕ ಮತ್ತು ಯುರೋಪಿನ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿರುವುದು ವರದಿಯಾಗಿದೆ. ಇಂತಹ ಸಂದರ್ಭದಲ್ಲೇ ಜಾಗತಿಕ ಮಟ್ಟದ ಬಿಡುಗಡೆ ಕಲೆಕ್ಷನ್ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಸಿನಿಮಾದ ಪ್ರಚಾರಕ್ಕಾಗಿ ವಿದೇಶ ಪ್ರವಾಸಗಳ ಯೋಜನೆಯೂ ಇತ್ತು. ಆದರೆ ಯುದ್ಧ ಪರಿಸ್ಥಿತಿಯಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ರಮಗಳು ಸಹ ಅಸಾಧ್ಯವಾಗುತ್ತಿವೆ.
ವ್ಯವಹಾರಿಕ ಹಾಗೂ ಭದ್ರತಾ ಅಂಶಗಳನ್ನು ಪರಿಗಣಿಸಿ ತೆಗೆದುಕೊಳ್ಳಲಾದ ಈ ನಿರ್ಧಾರ ಅಭಿಮಾನಿಗಳಿಗೆ ಬೇಸರ ತಂದರೂ, ಉದ್ಯಮದ ದೃಷ್ಟಿಯಿಂದ ಸೂಕ್ತ ಕ್ರಮವೆಂದು ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.



