ಡಂಕಿ ಸಿನಿಮಾದ ಮೊದಲ ಹಾಡು ಎಂಟ್ರಿಗೆ ಡೇಟ್ ಫಿಕ್ಸ್

0
Spread the love

ಶಾರುಖ್‌ ಖಾನ್‌ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಡಂಕಿ ಸಿನಿಮಾದ ರೋಮ್ಯಾಂಟಿಕ್ ನಂಬರ್ ಇದೇ ತಿಂಗಳ‌ 22ರಂದು ರಿಲೀಸ್ ಆಗಲಿದೆ. ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದಾರೆ. ಹೇಗಿರಲಿ ಡಂಕಿ ಮೊದಲ ಗಾನಬಜಾನ ಎಂಬ ನಿರೀಕ್ಷೆ ಹೆಚ್ಚಿಸಿದೆ.

Advertisement

ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್‌ ಕೊನೇ ವಾರದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.


Spread the love

LEAVE A REPLY

Please enter your comment!
Please enter your name here