ಹಾಸನ: 2024 ರ ನಂತರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ. ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಿಗಿದೆ ಎಂದು ಮಾಜಿಸಚಿವ ಎಚ್.ಡಿ.ರೇವಣ್ಣ ವಿರುದ್ಧ ಮಾಜಿ ಶಾಸಕ ಪ್ರೀತಂಗೌಡ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಭುವನೇಶ್ವರಿ ರಥ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
2024 ರ ನಂತರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ. ಅದರ ಶ್ರೇಯಸ್ಸು ಶ್ರೇಯಸ್‌ಪಟೇಲ್ ಅವರಿಗೆ ಸಲ್ಲುತ್ತದೆ. ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. ನಿಮ್ಮನ್ನೆಲ್ಲಾ ನೋಡಿದ ಮೇಲೆ ಹೊಳೆನರಸೀಪುರಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಅನ್ನಿಸಿತು ಎಂದರು.
ಇಷ್ಟುದಿನ ಈ ಭಾಗದಲ್ಲಿ ಯಾವುದೇ ಕಾರ್ಯಕ್ರಮಕ್ಕೆ ನಡೆಯುತ್ತದೆ ಎಂದರೆ, ಯಾವುದೋ ಒಂದು ಮನೆಗೆ, ಒಂದು ತೋಟದಲ್ಲಿ ಲೈಟ್ ಇರುತ್ತಿತ್ತು. ಇಡೀ ಹೊಳೆನರಸೀಪುರದಲ್ಲಿ ಲೈಟ್ ಇರುವುದನ್ನು ನಾನು ನೋಡಿರಲಿಲ್ಲ. ಈಗ ಹೊಳೆನರಸೀಪುರ ಪಟೇಲ್ರ ತಾತನ ಕಾಲಕ್ಕೆ ಕೊಂಡೊಯ್ದಿದೆ. ಈ ಸಂದರ್ಭದಲ್ಲಿ ಪುಟ್ಟಸ್ವಾಮಿ ಗೌಡರನ್ನು ಸ್ಮರಿಸುತ್ತೇನೆ ಎಂದು ಪ್ರೀತಂ ಗೌಡ ಹೇಳಿದರು.