ವಿಜಯಸಾಕ್ಷಿ ಸುದ್ದಿ, ಗದಗ : ಕನ್ನಡ, ಕನ್ನಡಿಗ, ಕರ್ನಾಟಕ ವಿಷಯಕ್ಕೆ ಸಂಬಂಧಿಸಿದಂತೆ ಪೂರಕ ಕಾರ್ಯಕ್ರಮಗಳನ್ನು ಹಾಗೂ ಹೋರಾಟಗಳನ್ನು ರೂಪಿಸಿಕೊಂಡು ಬಂದು ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆಯನ್ನು ಸದಾ ಜೀವಂತವಾಗಿರುವ ಕಾರ್ಯವನ್ನು ಪರಿಷತ್ತು ಶತಮಾನದಿಂದ ಮಾಡುತ್ತಾ ಬಂದಿದೆ.
ಪುಸ್ತಕ ಪ್ರಕಟನೆ, ಸಮ್ಮೇಳನ, ಕಾರ್ಯಾಗಾರ, ವಿಚಾರ ಸಂಕಿರಣ ಮುಂತಾದ ಕಾರ್ಯಚಟುವಟಿಕೆಗಳು ಪರಿಷತ್ತಿನ ಜೀವಾಳವಾಗಿವೆ ಎಂದು ಜಿಲ್ಲಾ ಗೌರವ ಕಾರ್ಯದರ್ಶಿ ಶಿವಾನಂದ ಗಿಡ್ನಂದಿ ಹೇಳಿದರು.
ಅವರು ಜಿಲ್ಲಾ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಸಾಪ ಕಾರ್ಯಾಲಯದ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನದಲ್ಲಿ ಜರುಗಿದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ `ಜನಸಾಮಾನ್ಯರತ್ತ ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಕುರಿತು ಮಾತನಾಡಿದರು.
ಕಳೆದ ಸಾಲಿನಲ್ಲಿ ಅತಿ ಹೆಚ್ಚು ಕನ್ನಡದ ಕಾರ್ಯಕ್ರಮಗಳನ್ನು ಸಂಘಟನೆ ಮಾಡಿರುವ ಹಿನ್ನೆಲೆಯಲ್ಲಿ ಮುಂಡರಗಿ ತಾಲೂಕಾ ಕಸಾಪ ಅಧ್ಯಕ್ಷ ಪ್ರೊ. ಎಂ.ಜಿ. ಗಚ್ಚಣ್ಣವರನ್ನು ಸನ್ಮಾನಿಸಲಾಯಿತು. ಡಾ. ರಶ್ಮಿ ಅಂಗಡಿ, ಮಾಜಿ ಸಚಿವ ಎಸ್.ಎಸ್. ಪಾಟೀಲ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಪರಿಷತ್ತಿನ 110ನೇ ಸಂಸ್ಥಾಪನಾ ದಿನದ ಅಂಗವಾಗಿ 110 ಸಸಿಗಳನ್ನು ತೋಟಗಾರಿಕೆ ಇಲಾಖೆಯ ನಿರ್ದೇಶಕ ಸುರೇಶ ಕುಂಬಾರ ವಿತರಿಸಿದರು. ಗವಿಸಿದ್ಧಯ್ಯ ಹಳ್ಳಿಕೇರಿಮಠ ಹಾಗೂ ಆರ್.ವಿ. ಮ್ಯಾಗೇರಿ ಅವರಿಂದ ಕನ್ನಡ ಗೀತಗಾಯನ ಜರುಗಿದವು. ಡಾ. ಅಕ್ಕಮಹಾದೇವಿ ರೊಟ್ಟಿಮಠ ನಿರೂಪಿಸಿದರು. ಕಿಶೋರಬಾಬು ನಾಗರಕಟ್ಟಿ ಸ್ವಾಗತಿಸಿದರು. ಶ್ರೀಕಾಂತ ಬಡ್ಡೂರ ವಂದಿಸಿದರು.
ಕಾರ್ಯಕ್ರಮದಲ್ಲಿ ಪ್ರೊ. ಕೆ.ಎಚ್. ಬೇಲೂರ, ಡಾ. ರಾಜಶೇಖರ ದಾನರಡ್ಡಿ, ಶಕುಂತಲಾ ಸಿಂಧೂರ, ವಿ. ಹರಿನಾಥಬಾಬು, ಸಿ.ಕೆ.ಎಚ್. ಶಾಸ್ತಿç, ಡಿ.ಎಸ್. ಬಾಪುರಿ, ಅಮರೇಶ ರಾಂಪೂರ, ಸಿ.ಎಂ. ಮಾರನಬಸರಿ, ಪ್ರ.ತೋ. ನಾರಾಯಣಪೂರ, ಬಸವರಾಜ ವಾರಿ, ಸತೀಶ ಚನ್ನಪ್ಪಗೌಡ್ರ, ಕೃಷ್ಣಾ ಸಾವುಕಾರ, ಶಿವಾನಂದ ಭಜಂತ್ರಿ, ಬಿ.ಎಸ್. ಹಿಂಡಿ, ಆಯ್.ಎಸ್. ಹಿರೇಮಠ, ಮಹೇಶ ಶಟವಾಜಿ, ಷಡಕ್ಷರಿ ಮೆಣಸಿನಕಾಯಿ, ಎಸ್.ಸಿ. ಹಾಳಕೇರಿ, ಅ.ದ. ಕಟ್ಟಿಮನಿ, ಕೆ.ಜಿ. ವ್ಯಾಪಾರಿ, ಶಿ.ಶಿ. ನರೇಗಲ್, ಮಂಜುನಾಥ ಹಿಂಡಿ, ಉಮಾ ಪಾರ್ವತಿಮಠ, ಡಾ. ರಾಜೇಂದ್ರ ಗಡಾದ ಮೊದಲಾದವರು ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ, ಪುಸ್ತಕ ಪ್ರಕಟನೆ, ಕಾರ್ಯಾಗಾರಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದೆ. ಕನ್ನಡ ನಾಡು-ನುಡಿ, ನೆಲ ಜಲದ ಪ್ರಶ್ನೆ ಬಂದಾಗ ಪರಿಷತ್ತು ಮುಂಚೂಣಿಯಲ್ಲಿ ನಿಂತು ಕನ್ನಡಿಗರಿಗೆ ನ್ಯಾಯ ಒದಗಿಸುವ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು.