ನನ್ನಣ್ಣನ ಜೀವವನ್ನ ಸರ್ಕಾರ ಕೊಡಲಾಗಲ್ಲ, ಪರಿಹಾರವನ್ನಾದರೂ ನೀಡಿ ನೆರವಾಗಲಿ: ವಿಕ್ರಂ ಗೌಡ ತಂಗಿ

0
Spread the love

ಉಡುಪಿ: 6 ಮಂದಿ ನಕ್ಸಲರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಲಿದ್ದಾರೆ. ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ತಮಿಳುನಾಡಿನ ಕೆ ವಸಂತ ಮತ್ತು ಕೇರಳದ ಟಿಎನ್ ಜೀಶಾ ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲಿದ್ದಾರೆ. ಇನ್ನೂ ಈ ವಿಚಾರವಾಗಿ ಮೃತ ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡ ಸಹೋದರಿ ಸುಗುಣ ಪ್ರತಿಕ್ರಿಯೇ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ, ಪರಿಹಾರ ಆದ್ರೂ ನೀಡಿ ಅಂತ ಮನವಿ ಮಾಡಿದ್ದಾರೆ. ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದಿದ್ದರೂ ನಮ್ಮ ದಿನ ಸಾಗೋದಿಲ್ಲ.

ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ, ಎನ್‌ಕೌಂಟರ್ ಆಗಿದೆ ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡೋ ಪರಿಹಾರವನ್ನ ನಮಗೂ ಕೊಟ್ರೆ ಸಾಕು, ನಾವು ಕಷ್ಟದಲ್ಲಿದ್ದೇವೆ ಎಂದು ಸುಗುಣ ಕೋರಿದ್ದಾರೆ.


Spread the love

LEAVE A REPLY

Please enter your comment!
Please enter your name here