ಬೆಂಗಳೂರು: ಹಳೆಯ ನಂಬರ್ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಕರ್ನಾಟಕ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೌದು.. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ 6 ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆಯಾಗಿದೆ.
ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಲಾಗಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿದೆ. ಕರ್ನಾಟಕದಲ್ಲಿ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳಿವೆ. ಇದರಲ್ಲಿ 58 ಲಕ್ಷ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿವೆ. 2019ರ ಏಪ್ರಿಲ್ 1ರ ಹಿಂದಿನ ಎಲ್ಲ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೆ ಕಡ್ಡಾಯವಾಗಿದೆ.
HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?
- https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು. ಇಲ್ಲಿ Book HSRP ಕ್ಲಿಕ್ ಮಾಡಿ.
- ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿ.
- ನಿಮ್ಮ ವಾಹನದ ವಿವರವನ್ನು ಅಲ್ಲಿ ನಮೂದಿಸಿ.
- ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿ
- HSRP ನಂಬರ್ ಪ್ಲೇಟ್‌ಗೆ ಅಲ್ಲಿ ನಮೂದಿಸಿದ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡಿ
- ಮೊಬೈಲ್ ನಂಬರ್‌ಗೆ ಬರುವ ಒಟಿಪಿಯನ್ನು ನಮೂದಿಸಿ
- HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ಪಡೆದುಕೊಳ್ಳಿ.