ರೈತರನ್ನ ಸರ್ಕಾರ ಒಕ್ಕಲೆಬ್ಬಿಸಲ್ಲ, ನೋಟಿಸ್ ವಾಪಸ್ ಪಡೆಯುತ್ತೇವೆ: CM ಸಿದ್ದರಾಮಯ್ಯ!

0
Spread the love

ಬೆಂಗಳೂರು:- ವಿಜಯಪುರದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ಕೊಟ್ಟಿರುವ ನೋಟಿಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೊನೆಗೂ ಮೌನ ಮುರಿದಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು,ವಿಜಯಪುರದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ಕೊಟ್ಟಿರುವ ನೋಟಿಸನ್ನು ವಾಪಸ್ ಪಡೆಯೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಯಾವುದೇ ರೈತರನ್ನ ಸರ್ಕಾರ ಒಕ್ಕಲು ಎಬ್ಬಿಸಲ್ಲ. ಸೋಮವಾರ ಮೂರು ಜನ ಸಚಿವರು ಸುದ್ದಿಗೋಷ್ಠಿ ಮಾಡಿ ಮಾತನಾಡಿದ್ದಾರೆ. ವಿಜಯಪುರದಲ್ಲಿ ಯಾವುದೇ ರೈತರನ್ನು ಒಕ್ಕಲೆಬ್ಬಿಸೋದಿಲ್ಲ. ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಯಾದಗಿರಿ ಮತ್ತು ಧಾರವಾಡದಲ್ಲಿ ರೈತರಿಗೆ ನೋಟಿಸ್ ಕೊಟ್ಟಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದರ ಬಗ್ಗೆ ನೋಡುತ್ತೇನೆ. ಕಂದಾಯ ಸಚಿವರಿಗೆ ಅದನ್ನು ಪರಿಶೀಲಿಸಲು ತಿಳಿಸುತ್ತೇನೆ ಎಂದರು.


Spread the love

LEAVE A REPLY

Please enter your comment!
Please enter your name here