ಸರ್ಕಾರ ಅಭಿಮಾನ್ ಸ್ಟುಡಿಯೋ ಜಾಗ ವಶಪಡಿಸಿಕೊಳ್ಳಬಹುದು ಅಂತಾ ಮೊದಲೇ ಗೊತ್ತಿತ್ತು: ಅನಿರುದ್ಧ್

0
Spread the love

 ಬೆಂಗಳೂರಿನ ಉತ್ತರಹಳ್ಳಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋ ಜಾಗವನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ನಿಯಮ ಹಾಗೂ ಷರತ್ತಿನ ಉಲಂಘನೆಯ ಕಾರಣದಿಂದ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು ಈ ಬಗ್ಗೆ ನಟ ವಿಷ್ಣುವರ್ಧನ್‌ ಅಳಿಯ ಅನಿರುದ್ಧ್‌ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಅಭಿಮಾನ್‌ ಸ್ಟುಡಿಯೋದಲ್ಲಿದ್ದ ನಟ ಡಾ.ವಿಷ್ಣುವರ್ಧನ್‌ ಸಮಾಧಿಯನ್ನು ಇತ್ತೀಚೆಗೆ ರಾತ್ರೋ ರಾತ್ರಿ ನೆಲಸಮ ಮಾಡಲಾಗಿತ್ತು. ಈ ಬಗ್ಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಅಭಿಮಾನ್‌ ಸ್ಟುಡಿಯೋವನ್ನು ಸರ್ಕಾರ ತನ್ನ ಸುಪರ್ದಿಗೆಗೆ ಪಡೆಯಬೇಕು ಎಂದು ಆಗ್ರಹಿಸಿದ್ದರು. ಅಂತೆಯೇ ಇದೀಗ ಸರ್ಕಾರ ಅಭಿಮಾನ್‌ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಜಾಗ ಮುಟ್ಟುಗೋಲು ಹಾಕಿಕೊಂಡಿರೋದಕ್ಕೆ ಡಾ.ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಪ್ರತಿಕ್ರಿಯಿಸಿದ್ದು, ಸರ್ಕಾರ ಅಭಿಮಾನ್ ಸ್ಟುಡಿಯೋ ಜಾಗ ವಶಪಡಿಸಿಕೊಳ್ಳಬಹುದು ಅಂತಾ ಮೊದಲೇ ಗೊತ್ತಿತ್ತು. ಆ ನಿಟ್ಟಿನಲ್ಲಿ 6 ವರ್ಷದಿಂದ ಪ್ರಯತ್ನ ಪಟ್ಟಿದ್ವಿ, ಆದರೆ ಆಗಿರಲಿಲ್ಲ. ಈಗ ನಮಗೆ ತುಂಬಾ ಖುಷಿಯಾಗಿದೆ. ಅಪ್ಪಾಜಿ ಅಂತ್ಯ ಸಂಸ್ಕಾರದ ಜಾಗದಲ್ಲಿ ಭಾರತಿ ಅಮ್ಮ ಸ್ಮಾರಕ ಕಟ್ಟಿದ್ದರು. ಆದರೆ ವಿರೋಧಿಗಳು ನೆಲಸಮ ಮಾಡಿಬಿಟ್ಟರು.

ಮುಟ್ಟುಗೋಲು ಬಗ್ಗೆ ಅಧಿಕೃತ ಘೋಷಣೆ ಬಂದಿರಲಿಲ್ಲ, ಈಗ ಬಂದಿದೆ. ಕೇವಲ 10 ಗುಂಟೆ ಜಾಗ ಕೇಳ್ತೀವಿ. ನಿನ್ನೆಯ ದಿನ ಸಿಎಂ ಭೇಟಿಯಾದಾಗ ಈ ಬಗ್ಗೆ ಚರ್ಚೆ ಮಾಡಿರಲಿಲ್ಲ. ನಾನು ಏನು ಹೇಳ್ತಿದ್ದಿನೋ, ಅದನ್ನೇ ಅಮ್ಮ ಹೇಳ್ತಿರೋದು. ಸಿಎಂ ಕಳೆದ ಬಾರಿ ಹೋದಾಗಲೂ ‘ಕರ್ನಾಟಕ ರತ್ನ’ ಬಗ್ಗೆ ಭರವಸೆ ಕೊಟ್ಟಿದ್ದರು. ಈ ಬಾರಿಯೂ ಭರವಸೆ ನೀಡಿದ್ದಾರೆ. ಭಿನ್ನಾಭಿಪ್ರಾಯ ಇರುವ ಅಭಿಮಾನಿಗಳು ಅಭಿಮಾನಿಗಳಲ್ಲ. ನಿಜವಾದ ಅಭಿಮಾನಿಗಳು ಸದಾ ನಮ್ಮ ಜೊತೆ ಇರೋರು ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here