ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಅರ್ಲಾಪುರ್ ಕ್ರಾಸ್‌ನಲ್ಲಿ ಕಬ್ಬು ಪ್ರತಿ ಟನ್‌ಗೆ 3500 ರೂ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿ ಹಸಿರುಸೇನೆ ರೈತ ಸಂಘದ ಅಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ರೈತರ ನ್ಯಾಯಯುತವಾದ ಹೋರಾಟಕ್ಕೆ ಬೆಂಬಲವಾಗಿ ನಿಂತು ರೈತರನ್ನು ಬೆಳೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಗೌರವಾಧ್ಯಕ್ಷ ನಿಂಗನಗೌಡ ಎಸ್. ಮಾಲಿಪಾಟೀಲ ರಾಜ್ಯ ಸರ್ಕಾರವನ್ನು ವಿನಂತಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ ನಿರ್ಲಕ್ಷ್ಯ ತೋರದೆ ರೈತರ ಬೇಡಿಕೆಗಳಿಗೆ ಸ್ಪಂದಿಸಬೇಕು. ಒಂದು ವೇಳೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಮಾನಗಳಲ್ಲಿ ರೈತರ ಜೊತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ್ರು ಅವರ ಮಾರ್ಗದರ್ಶನದಲ್ಲಿ ಉಗ್ರವಾಗಿ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.



