ಬೆಂಗಳೂರು :ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದನ್ನು ಸರ್ಕಾರ ತಡೆಗಟ್ಟಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಬಗ್ಗೆ ರಾಜ್ಯ ಸರಕಾರ ಇದೀಗ ಎಸ್‍ಐಟಿ ರಚಿಸಿದೆ. ಶೀಘ್ರದಲ್ಲಿ ತನಿಖೆ ಆಗಲಿ. ಪಾರದರ್ಶಕ ತನಿಖೆ ಆಗಿ ಸತ್ಯಾಂಶ ಹೊರಬರಬೇಕೆಂಬುದು ಎಲ್ಲರ ಆಶಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ವಿಚಾರ ಇಟ್ಟುಕೊಂಡು ಅಲ್ಲಿನ ವಾತಾವರಣ ಹಾಳು ಮಾಡುವ, ಅಲ್ಲಿನ ವ್ಯವಸ್ಥೆ ಹಾಳು ಮಾಡುವುದು, ಅಪಪ್ರಚಾರ ಮಾಡುವುದನ್ನು ಸರಕಾರ ತಡೆಯಬೇಕು. ಇದರ ಹಿಂದಿನ ಕುತಂತ್ರ ನಮಗೂ ತಿಳಿದಿದೆ. ಅಲ್ಲಿನ ವ್ಯವಸ್ಥೆ ಹಾಳು ಮಾಡಲು ಮುಂದಾದರೆ ಏನು ಮಾಡಬೇಕೆಂದು ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.