ಸರ್ಕಾರದ ಖಜಾನೆ ತುಂಬಿದೆ ಅಂತಿದ್ರಿ, ನೌಕರರ ಪ್ರಾಬ್ಲಮ್ ಅರ್ಥ ಆಗ್ತಿಲ್ವಾ? – ಆರಗ ಜ್ಞಾನೇಂದ್ರ ಕಿಡಿ!

0
Spread the love

ಬೆಂಗಳೂರು:- ಖಜಾನೆ ತುಂಬಿರೋ ಸರ್ಕಾರಕ್ಕೆ ಸಾರಿಗೆ ನೌಕರರ ಸಮಸ್ಯೆ ಪರಿಹರಿಸಲು ಕಷ್ಟ ಯಾಕೆ? ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರ ಜೊತೆ ಸರ್ಕಾರ ಮಾತುಕತೆ ನಡೆಸುವಲ್ಲಿ ವಿಫಲವಾಗಿದೆ.

Advertisement

ಹಿಂದೆ ಯಡಿಯೂರಪ್ಪ ಇದ್ದಾಗ ಇದೇ ಸಿದ್ದರಾಮಯ್ಯ ನಮಗೆ ಪ್ರಶ್ನೆ ಮಾಡಿದ್ರು. ಸಾರಿಗೆ ನೌಕರರ ಮೇಲೆ ಎಸ್ಮಾ ಹಾಕಿ ಹೆದರಿಸಿದ್ರು. ನಿನ್ನ ಕುರ್ಚಿ ಎಷ್ಟು ಶಾಶ್ವತ ಎಂದು ತಿಳಿದುಕೊಂಡಿದ್ದೀಯಾ ಅಂತಾ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಈಗ ನಾನು ಸಿದ್ದರಾಮಯ್ಯಗೆ ಪ್ರಶ್ನೆ ಮಾಡ್ತೀನಿ.ನೀವು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೀರಾ ಎಂದುಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ನೀವು ಫ್ರೀ ಅಂತಾ ನೌಕರರಿಗೆ ಸಂಬಳವನ್ನೇ ಕೊಡುತ್ತಿಲ್ಲ. ನೌಕರರನ್ನು ಕರೆದು ಮಾತಾಡಿ ಸಮಸ್ಯೆ ಬಗೆಹರಿಸಬೇಕಿತ್ತು. ಇದರಿಂದ ಜನರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಖಾಸಗಿ ಬಸ್‌ನವರು ಹೆಚ್ಚು ಹಣ ವಸೂಲಿ ಮಾಡ್ತಿದ್ದಾರೆ. ಜನಸಾಮಾನ್ಯರ ಹಣ ವ್ಯರ್ಥ ಆಗ್ತಿದೆ. ಇದಕ್ಕೆ ಕಡಿವಾಣ ಹಾಕಲು ತಕ್ಷಣವೇ ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳಬೇಕು. ಎಲ್ಲದಕ್ಕೂ ನಮ್ಮ ಮೇಲೆ ಬೆರಳು ತೋರಿಸ್ತಾರೆ. ಅವರು ಮಾಡಿದನ್ನು ನಾವು ತೀರಿಸಿದ್ದೇವೆ ಎನ್ನುತ್ತಾರೆ. ಹೌದಪ್ಪ ನಾವು ಕೆಟ್ಟದನ್ನು ಮಾಡಿದ್ದೇವೆ. ಜನ ನಮ್ಮನ್ನು ಸೋಲಿಸಿದ್ದಾರೆ. ನಿಮ್ಮನ್ನು ಗೆಲ್ಲಿಸಿದ್ದಾರಲ್ಲ ನೀವು ಅವರಿಗೆ ಒಳ್ಳೆಯದು ಮಾಡಬೇಕಿತ್ತಲ್ಲ. ಖಜಾನೆ ತುಂಬಿ ತುಳುಕುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ರಿ. ಈಗ ಹಣ ಇಲ್ಲ ಅಂತೀರಲ್ಲ. ನುಡಿದಂತೆ ನಡೆದಿದ್ದೇವೆ ಅಂತೀರಲ್ಲ ಇದೇನಾ ನಿಮ್ಮ ಮಾತು ಎಂದು ಹರಿಹಾಯ್ದಿದ್ದಾರೆ.


Spread the love

LEAVE A REPLY

Please enter your comment!
Please enter your name here