ಮಂಡ್ಯ:- ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಂಥನಹಳ್ಳಿಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ.
Advertisement
ಕೌಟುಂಬಿಕ ಕಲಹದಿಂದ ಜಯರಾಮು ಎಂಬಾತ ತನ್ನ 38 ವರ್ಷದ ತೇಜಸ್ವಿನಿ ಕೊಲೆ ಮಾಡಿದ್ದಾನೆ. ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.
ತೇಜಸ್ವಿನಿ ಕುತ್ತಿಗೆಗೆ ಜಯರಾಮು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಬಳಿಕ ಕೊಡಲಿಯಿಂದ ತಲೆ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತೇಜಸ್ವಿನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.