ಗಂಡ ವಿಷ ಕುಡಿದಿಲ್ಲ, ಪತಿ ಸಾವಿನ ಹಿಂದೆ ಪತ್ನಿ ಕೈವಾಡ? ಚಾಲಾಕಿ ಹೆಂಡ್ತಿ ಪ್ಲ್ಯಾನ್ ಹೇಗಿತ್ತು?

0
Spread the love

ರಾಮನಗರ:- ವಿಷ ಕುಡಿದು ಪತಿ ಸೂಸೈಡ್ ಮಾಡಿಕೊಂಡಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆ ನಾಟಕ ಮಾಡಿದ್ದ ಹೆಂಡ್ತಿಯ ಅಸಲಿ ಮುಖ ಬಯಲಾಗಿದೆ.

Advertisement

ಕಳೆದ ಜೂ. 24ರಂದು ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ ಸದಸ್ಯೆ ಚಂದ್ರಕಲಾ ಪತಿ ಲೋಕೇಶ್ (45) ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಲೋಕೇಶ್ ಶವದ ಬಳಿ ವಿಷದ ಬಾಟಲಿ ಇಟ್ಟು, ಸೂಸೈಡ್ ಎಂದು ಬಿಂಬಿಸಲಾಗಿತ್ತು. ಈ ಸಂಬಂಧ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರಿಗೆ ಇದೀಗ ಹೆಂಡತಿಯ ಕೈವಾಡ ಇರೋದು ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಚಂದ್ರಕಲಾ ಫೋನ್‌ನಿಂದ ಆಕೆಯ ಅನೈತಿಕ ಸಂಬಂಧದ ಮಹತ್ವದ ಸುಳಿವು ಸಿಕ್ಕಿತ್ತು. ಯೋಗೇಶ್ ಎಂಬಾತನೊಂದಿಗೆ ಚಂದ್ರಕಲಾ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಪತಿ ಅಡ್ಡಿಯಾಗಿದ್ದ ಹಿನ್ನೆಲೆ ಪ್ರಿಯಕರನ ಜೊತೆ ಸೇರಿ ಗಂಡ ಕೊಲೆಗೆ ಸ್ಕೆಚ್ ಹಾಕಿದ್ದಳು. ಬೆಂಗಳೂರಿನ ನಾಲ್ವರು ಸುಫಾರಿ ಕಿಲ್ಲರ್‌ಗಳಿಗೆ ಹಣ ಕೊಟ್ಟ ಈ ಮಹಿಳೆ, ಪತಿಯ ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ.

ಸದ್ಯ ಎಂ.ಕೆ.ದೊಡ್ಡಿ ಪೊಲೀಸರು ಗ್ರಾ.ಪಂ ಸದಸ್ಯೆ ಚಂದ್ರಕಲಾಳನ್ನ ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here