ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಮೇನ್ ಗೇಟ್ ಮತ್ತು ಬೇರೆ ಗೇಟ್ಗಳಲ್ಲಿ ಅದರಲ್ಲೂ ಮುಖ್ಯವಾಗಿ ಗೇಟ್ ನಂಬರ್ 17 ರ ಬಳಿ ಕಾಲ್ತುಳಿತದ ಘಟನೆ ಸಂಭವಿಸಿ 11 ಜನ ಅಸುನೀಗಿದರು ಮತ್ತು 10ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
  
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಘಟನೆ ರಾಜ್ಯದ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ, ಮೃತಪಟ್ಟ ಯುವಕ–ಯುವತಿಯರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದರು.
ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಸರ್ಕಾರ ಯಾವುದೇ ಸಭೆ ಸಮಾರಂಭಗಳನ್ನು ಮಾಡುವಾಗ, ವಿಜಯೋತ್ಸವವನ್ನು ಮಾಡುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿ ಮಾಡಬೇಕೆಂದು ಸೂಚನೆಗಳನ್ನು ನೀಡುತ್ತೇವೆ. ಹೊಸ ಶಿಷ್ಟಾಚಾರಗಳನ್ನು ಜಾರಿಗೆ ತರಲಾಗುವುದು ಎಂದರು.


