ಮೈಸೂರು: ಜಾತಿಗಣತಿಯನ್ನು ರಾಜಕೀಯವಾಗಿ ಎಲ್ಲರೂ ಬಳಕೆ ಮಾಡಿಕೊಳ್ಳುವುದು ಗೊತ್ತಿರುವ ವಿಚಾರ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಗೆ ನಮ್ಮ ತಕರಾರಿಲ್ಲ. ಆದರೆ ಅದು ವೈಜ್ಞಾನಿಕವಾಗಿ ಆಗಬೇಕು. ಈ ಬಗ್ಗೆ ಸರ್ಕಾರ ಏನು ಮಾಡುತ್ತದೆ ಎಂದು ನೋಡೋಣ.
10 ವರ್ಷದ ಹಿಂದಿನ ಗಣತಿಯನ್ನು ಈಗ ಬಿಡುಗಡೆ ಮಾಡಲು ಹೊರಟಿದ್ದಾರೆ. ಇದು ಸರಿಯಲ್ಲ ಅಂತ ಅನೇಕರು ಅಭಿಪ್ರಾಯ ಪಟ್ಟಿದ್ದಾರೆ. ಜಾತಿಗಣತಿಯನ್ನು ರಾಜಕೀಯವಾಗಿ ಎಲ್ಲರೂ ಬಳಕೆ ಮಾಡಿಕೊಳ್ಳುವುದು ಗೊತ್ತಿರುವ ವಿಚಾರ. ಆದರೆ ಸರಿಯಾದ ರೀತಿಯಲ್ಲಿ ಗಣತಿ ಆಗ್ಬೇಕು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.



