ಬೆಂಗಳೂರು: ಪ್ರಣವ್ ಮಹಾಂತಿ ಕೇಂದ್ರ ಸೇವೆಗೆ ಕಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಶವಗಳನ್ನು ಹೂಲಾಗಿದೆ ಎಂಬ ಪ್ರಕರಣದ ತನಿಖೆಗೂ ಪ್ರಣವ್ ಮೊಹಾಂತಿ ಕೇಂದ್ರ ಸೇವೆಗೆ ಸಂಬಂಧ ಇಲ್ಲ. ಇವೆಲ್ಲಾ ತಪ್ಪು ಕಲ್ಪನೆಯಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
Advertisement
ಧರ್ಮಸ್ಥಳ ಪ್ರಕರಣದಲ್ಲಿ ಡಿಜಿ ಮಟ್ಟದ ಅಧಿಕಾರಿಗಳನ್ನು ತನಿಖೆಗೆ ನಿಯೋಜಿಸಬೇಕು ಅಂತ ಹೇಳಿದ್ವಿ. ಹೀಗಾಗಿ ಮೊಹಾಂತಿ ಅವರನ್ನು ನೇಮಕ ಮಾಡಲಾಗಿದೆ. ಈಗ ಕೇಂದ್ರದ ಸೇವೆಗೆ ಕರೆಸಿಕೊಳ್ಳುವ ಪಟ್ಟಿಯಲ್ಲಿ ಅವರ ಹೆಸರಿದೆ. ನಾವು ಇನ್ನೂ ಕೂಡ ಅದರ ಬಗ್ಗೆ ಏನು ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದರು.