HomeGadag Newsದಿ. ಕೆ.ಎಚ್. ಪಾಟೀಲರು ಹುಟ್ಟು ಹೋರಾಟಗಾರರು

ದಿ. ಕೆ.ಎಚ್. ಪಾಟೀಲರು ಹುಟ್ಟು ಹೋರಾಟಗಾರರು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೆ.ಎಚ್. ಪಾಟೀಲರು ತಮ್ಮ ಗೌಡಿಕೆಯನ್ನು ಮೀರಿ ಜನ ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದರ ಜೊತೆಗೆ ಅವರು ಜನರ ಕಷ್ಟಗಳಿಗೆ ಸ್ಪಂದಿಸುವ ಹುಟ್ಟು ಹೋರಾಟಗಾರರಾಗಿದ್ದರು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ಅವರು ರವಿವಾರ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಶಿರೂರ ಪುನರವಸತಿ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಸಚಿವರಾಗಿದ್ದ ದಿ. ಕೆ.ಎಚ್. ಪಾಟೀಲ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ರಾಜಕಾರಣದಲ್ಲಿ ಬಹಳ ವರ್ಷಗಳ ಕಾಲ ಜನ ಸಮುದಾಯದಲ್ಲಿ ಉಳಿದ ಕೆ.ಎಚ್. ಪಾಟೀಲರ ಮೂರ್ತಿಯನ್ನು ಇಂದು ಸಂತೋಷದಿಂದ ಅನಾವರಣಗೊಳಿಸಿದ್ದೇನೆ. ನಾನು ಮೊದಲ ಬಾರಿ ಶಾಸಕನಾಗಿದ್ದಾಗ ಕೆ.ಎಚ್. ಪಾಟೀಲರು ಕಂದಾಯ ಸಚಿವರಾಗಿದ್ದರು. ಯುವ ಉತ್ಸಾಹದ ಹೊಸ ಶಾಸಕರನ್ನು ಅವರು ಪ್ರೀತಿಯಿಂದ ಮಾತನಾಡಿಸುವುದರ ಜೊತೆಗೆ ನಮ್ಮನ್ನು ಪ್ರೋತ್ಸಾಹಿಸುತ್ತಿದ್ದರು. ಜನರ ಕಷ್ಟಗಳನ್ನು ದೂರ ಮಾಡುವ ಸಲುವಾಗಿ ಅವರು ಸಹಕಾರಿ, ಸಾಮಾಜಿಕ, ಆರ್ಥಿಕ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದರು ಎಂದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಮಾತನಾಡಿ, ಕೆ.ಎಚ್. ಪಾಟೀಲರು ಒಳ್ಳೆಯ ಆಡಳಿತಗಾರರಾಗಿದ್ದರು. ಅವರು ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ತಮ್ಮ ಸರಳ ವ್ಯಕ್ತಿತ್ವದ ಜೊತೆಗೆ ಆಡಳಿತದಲ್ಲಿ ಹಿಡಿತ ಉಳ್ಳವರಾಗಿದ್ದರು. ಕೆ.ಎಚ್. ಪಾಟೀಲರನ್ನು ಹುಲಕೋಟಿಯ ಹುಲಿ ಎಂದೇ ಕರೆಯುತ್ತಿದ್ದರು ಎಂದು ಹೇಳಿದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಮಾತನಾಡಿದರು.

ಸಮಾರಂಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ, ಕೊಪ್ಪಳ ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಮುನಿರಾಬಾದ್ ತುಂಗಭದ್ರಾ ಯೋಜನೆಯ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್.ಅರಸಿದ್ದಿ, ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ನೀರಾವರಿ ಕೇಂದ್ರ ವಲಯ ಮುನಿರಾಬಾದನ ಮುಖ್ಯ ಇಂಜಿನಿಯರ್ ಎಲ್.ಬಸವರಾಜ, ಕನೀನಿನಿ ಸಿಂಗಟಾಲೂರ ಏತ ನೀರಾವರಿ ಯೋಜನೆ ವಿಭಾಗ ನಂ.1 ಮುಂಡರಗಿಯ ಕಾರ್ಯ ನಿರ್ವಾಹಕ ಅಭಿಯಂತರರಾದ ಐ.ಪ್ರಕಾಶ, ಕನೀನಿನಿ ಸಿಂಗಟಾಲೂರ ಏತ ನೀರಾವರಿ ಯೋಜನೆ ಉಪ ವಿಭಾಗ ನಂ.3 ಅಳವಂಡಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಘವೇಂದ್ರಚಾರ್ಯ ಜೋಶಿ, ಜಿ.ಪಂ ಮಾಜಿ ಉಪಾಧ್ಯಕ್ಷ ಯಂಕಣ್ಣ ಯರಾಶಿ ಹಾಗೂ ಹನಮಂತಗೌಡ ಪಾಟೀಲ್, ಕುಕನೂರಿನ ಸತ್ಯನಾರಾಯಣ ಹರಪನಹಳ್ಳಿ, ಜಿ.ಪಂ ಮಾಜಿ ಸದಸ್ಯ ಅಶೋಕ ತೋಟದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಕಾಶಿಂಸಾಬ ತಳಕಲ್, ಕುಕನೂರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಸಂಗಮೇಶ ಗುತ್ತಿ, ಗ್ರಾ.ಪಂ ಸರ್ವ ಸದಸ್ಯರು, ಯೋಜನಾ ಅನುಷ್ಠಾನ ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ಶಿರೂರು ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಮಾತನಾಡಿ, ಹತ್ತಿ ಮಾರುವುದಕ್ಕಾಗಿ ರೈತರಿಗೆ ಬಹು ದೊಡ್ಡ ಸವಾಲಾಗಿದ್ದ ಸಂದರ್ಭದಲ್ಲಿ ಕೆ.ಹೆಚ್. ಪಾಟೀಲರು ಸಹಕಾರಿ ಕ್ಷೇತ್ರದ ಮುಖಾಂತರ ಹತ್ತಿ ಮಿಲ್‌ಗಳನ್ನು ಪ್ರಾರಂಭ ಮಾಡಿ ರೈತರ ರಕ್ಷಣೆ ಮಾಡಿದರು. ಸಾಮಾಜಿಕ ನ್ಯಾಯವನ್ನು ಒದಗಿಸಲು ಸಹಕಾರ ಕ್ಷೇತ್ರದ ಮೂಲಕ ಹೋರಾಟ ಮಾಡಿರುವ ಅವರನ್ನು ನೆನಪಿಸುವಂತಹ ಕಾರ್ಯ ಶಿರೂರು ಗ್ರಾಮದಲ್ಲಾಗಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!