ನವೆಂಬರ್ 22ಕ್ಕೆ ರಿಲೀಸ್ ಆಗ್ತಿದೆ ಕನ್ನಡದ ‘ಮರ್ಯಾದೆ ಪ್ರಶ್ನೆ’ ಸಿನಿಮಾ!

0
Spread the love

ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಹೊಸ ಕಥೆಯ ಕಂಟೆಂಟ್‌ಗಳು ಹಾಗೂ ನಿರೂಪಣೆಯಲ್ಲಿ ಹೊಸತನವಿರುವ ಸಿನಿಮಾಗಳು ಹೆಚ್ಚು ಗಮನ ಸೆಳೆಯುತ್ತಿವೆ. ಈಗ ಈ ಸಾಲಿಗೆ ‘ಮರ್ಯಾದೆ ಪ್ರಶ್ನೆ’ ಸಿನಿಮಾ ಸೇರಿದ್ದು, ಈಗಾಗಲೇ ಇದು ವಿಭಿನ್ನ ಶೀರ್ಷಿಕೆ ಮೂಲಕ ಸದ್ದು ಮಾಡಿದೆ.

Advertisement

ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ಮರ್ಯಾದೆ ಪ್ರಶ್ನೆ ಸಿನಿಮಾ ತೆರೆಗೆ ಬರೋದಿಕ್ಕೆ ಮುಹೂರ್ತ ನಿಗದಿಯಾಗಿದೆ. ಬೆಂಗಳೂರಿನ ಹೈಡ್ ಪಾರ್ಕ್ ಹೋಟೆಲ್ ನಲ್ಲಿ ಚಿತ್ರತಂಡ ಬಹಳ ಉತ್ಸುಕತೆಯಿಂದ ತಮ್ಮ ಕನಸ್ಸನ್ನು ಪ್ರೇಕ್ಷಕರ ಮುಂದೆ ಪ್ರಸ್ತುತಪಡಿಸಲು ಕಾತರದಿಂದ ಸುದ್ದಿಗೋಷ್ಠಿಗೆ ಹಾಜರಾಗಿತ್ತು. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್, ನಿರ್ದೇಶಕ ನಾಗರಾಜ್ ಸೋಮಯಾಜಿ ಸೇರಿದಂತೆ ಇಡೀ ತಂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು..

ಈ ವೇಳೆ ಮಾತನಾಡಿದ ನಿರ್ಮಾಪಕ ಆರ್.ಜೆ.ಪ್ರದೀಪ್, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಮಾಡಬೇಕು ಅನ್ನೋದು ಇತ್ತು. ನಾನು ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು. ಹೀಗೆ ಶುರುವಾದ ಜರ್ನಿ ನಾವು ಮತ್ತೆ ಹಿಂದೆ ತಿರುಗಿ ನೋಡಲೇ ಇಲ್ಲ. ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ ಎಂದರು.

ನಾಗರಾಜ್ ಸೋಮಯಾಜಿ ಮಾತನಾಡಿ, ನಾನು ಪ್ರದೀಪ್ ಕ್ಲೋಸ್ ಫ್ರೆಂಡ್ಸ್. ಅದ್ಭುತ ತಾರಾಬಳಗ, ಪ್ರೇಕ್ಷಕರಿಗೆ ಇಷ್ಟವಾಗುವ ನೈಜತೆ ಇರುವ ಸಿನಿಮಾ ಮಾಡಿದ್ದೇವೆ. ತಾರಾಬಳಗದ ಜೊತೆಗೆ ನಮ್ ಟೆಕ್ನಿಕಲ್ ಟೀಂ ಕೂಡ ಸ್ಟ್ರಾಂಗ್ ಆಗಿದೆ. ಈ ಸಿನಿಮಾ ಜನಕ್ಕೆ ತಲುಪಿಸಲು ನಿಮ್ಮ ಪ್ರೀತಿ ಬೇಕು. ಉಳಿದದ್ದನ್ನು ಜನ ದುಪ್ಪಟ್ಟು ಮಾಡುತ್ತಾರೆ.

ನವೆಂಬರ್ 22ಕ್ಕೆ ಮರ್ಯಾದೆ ಪ್ರಶ್ನೆ ರಿಲೀಸ್
ಒಂದು ಯಶಸ್ವಿ ಚಿತ್ರ ಯಾವ್ಯಾವ ಸ್ವರೂಪದಲ್ಲಿ ಪ್ರೇಕ್ಷಕರ ಗಮನಸೆಳೆಯುತ್ತದೆಯೋ ಆ ಎಲ್ಲಾ ರೀತಿಯಿಂದಲೂ ಸದ್ದು ಮಾಡುತ್ತಾ ಸಾಗುತ್ತಿರುವ ಫ್ಯಾಮಿಲಿ ಎಂಟರ್ ಟೈನರ್ ಮರ್ಯಾದೆ ಪ್ರಶ್ನೆ ಚಿತ್ರ ನವೆಂಬರ್ 22ಕ್ಕೆ ಬಿಡುಗಡೆಯಾಗ್ತಿದೆ. ಆಕರ್ಷಕ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಣೆ ಮಾಡಿದೆ. ಚಿತ್ರದ ಪೋಸ್ಟರ್ ಇದೊಂದು ಫ್ಯಾಮಿಲಿ ಕುಳಿತು ನೋಡುವ ಸಿನಿಮಾ ಅನ್ನೋದನ್ನು ಹೇಳ್ತಿದೆ. ರಾಜ್ಯ ಮಾತ್ರವಲ್ಲ ಹೈದ್ರಾಬಾದ್, ಚೆನ್ನೈ, ಹೀಗೆ ಬೇರೆ ರಾಜ್ಯಗಳ ಜೊತೆಗೆ ವಿದೇಶದಲ್ಲಿಯೂ ಮರ್ಯಾದೆ ಪ್ರಶ್ನೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್‌ ಅಡಿಗ, ಸುನೀಲ್‌ ರಾವ್‌, ಶೈನ್‌ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡ್ಕೂರ್‌, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್‌ ಮುಖ್ಯ ತಾರಾಗಣದಲ್ಲಿದ್ದಾರೆ. ಸಕ್ಕತ್‌ ಸ್ಟುಡಿಯೋ ಬ್ಯಾನರ್‌ನಡಿ ಪ್ರದೀಪ್‌ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಪ್ರದೀಪ್‌ ಅವರೇ ಕಥೆ ಬರೆದಿದ್ದಾರೆ. ಕ್ರಿಯೆಟಿವ್ ಹೆಡ್ ಕೂಡ ಸಾಥ್ ಕೊಟ್ಟಿದ್ದಾರೆ. ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here