ಬಿಬಿಎಂಪಿ ಅಕ್ರಮಗಳ ತನಿಖೆಗೆ ರಚಿಸಲಾಗಿದ್ದ ತನಿಖಾ ಸಮಿತಿ ರದ್ದುಗೊಳಿಸಿದ ಕರ್ನಾಟಕ ಸರ್ಕಾರ

0
Spread the love

ಬೆಂಗಳೂರು:- ನಾಲ್ಕು ಪರಿಣಿತರ ತನಿಖಾ ಸಮಿತಿಗಳನ್ನು ಸರ್ಕಾರ ರದ್ದು ಮಾಡಿದೆ.

Advertisement

ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರವರೆಗೆ ಪ್ರಮುಖ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಯನ್ನು ನಡೆಸಲು ನಾಲ್ಕು ಪರಿಣಿತರ ತನಿಖಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿತ್ತು. ಆದರೆ ರಾಜ್ಯ ಸರ್ಕಾರವು ರದ್ದುಪಡಿಸಿದೆ.

ಘನತ್ಯಾಜ್ಯ ನಿರ್ವಹಣೆ ಕಾಮಗಾರಿ, ರಸ್ತೆ ಅಭಿವೃದ್ಧಿ, ಓಎಫ್‌ಸಿ ಕೇಬಲ್ ಅಳವಡಿಕೆ, ಬೃಹತ್ ನೀರುಗಾಲುವೆ ಕಾಮಗಾರಿ, ಕೇಂದ್ರ/ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ/ ಸ್ವಾಧೀನಾನುಭವ ಪತ್ರ ನೀಡುವಿಕೆ, ಕೆರೆಗಳ ಅಭಿವೃದ್ಧಿ ಕಾಮಗಾರಿ, ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿ, ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸಿ, 30 ದಿನಗಳಲ್ಲಿ ವರದಿ ಒಪ್ಪಿಸುವಂತೆ ಆದೇಶಿಸಲಾಗಿತ್ತು.

ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ನಡೆಸಲು ಈಗಾಗಲೇ ನಿವೃತ್ತ ನ್ಯಾಯಮೂರ್ತಿ ಎಚ್. ಎನ್ ನಾಗಮೋಹಾನ್ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಿ, ಸರ್ಕಾರ ಆದೇಶಿಸಿತ್ತು.

ಬಿಬಿಎಂಪಿ ಕಾಮಗಾರಿಗಳು ಇದರ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ನಾಲ್ಕು ಸಮಿತಿಗಳನ್ನು ರದ್ದುಪಡಿಸುವಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಕೋರ್ಟ್ ಆದೇಶ ಹೊರ ಬಂದ ನಂತರ ನಾಲ್ಕು ಸಮಿತಿಗಳನ್ನು ಸರ್ಕಾರ ರದ್ದುಪಡಿಸಿದೆ.


Spread the love

LEAVE A REPLY

Please enter your comment!
Please enter your name here