ನಂಬಿದ ಭಕ್ತರನ್ನು ರಾಯರು ಕೈಬಿಡರು

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ರಾಘವೇಂದ್ರ ಸ್ವಾಮಿಗಳ ಆರಾಧನೆಯ ನಿಮಿತ್ತ ಕೊನೆಯ ದಿನವಾದ ಮಂಗಳವಾರ ರಾಯರ ರಥೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು. ರಥೋತ್ಸವದ ನಂತರ ಶ್ರೀಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಗೌರವಿಸಲಾಯಿತು.

Advertisement

ಶ್ರೀಮಠದ ಧರ್ಮದರ್ಶಿ ಹನುಮಂತಾಚಾರ್ಯ ಹೊಂಬಳ, ಸಮಾಜದ ಹಿರಿಯ ಮುಖಂಡ ಕೃಷ್ಣ ಕುಲಕರ್ಣಿ ಮಾತನಾಡಿ, ನಂಬಿದ ಭಕ್ತರನ್ನು ರಾಯರು ಕೈಬಿಟ್ಟ ಉದಾಹರಣೆಗಳಿಲ್ಲ. ನೂರಾರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಎಲ್ಲರ ಸಹಾಯ-ಸಹಕಾರದಿಂದ ಆರಾಧನೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಸೇವೆ ಮಾಡಿದವರಿಗೆ ಇಷ್ಟಾರ್ಥಗಳನ್ನು ಈಡೇರಿಸುವ ರಾಯರ ಕಾರ್ಯಕ್ರಮವನ್ನು ಎಲ್ಲ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಗೊಳಿಸುವ ಸಂಪ್ರದಾಯ ನಮ್ಮ ಭಾಗದಲ್ಲಿ ಉತ್ತಮ ಪರಂಪರೆಯಾಗಿದೆ. ಆರಾಧನೆ ಕಾರ್ಯಕ್ರಮ ಯಶಸ್ವಿಯಾಗಿರುವದಕ್ಕೆ ಎಲ್ಲರಿಗೂ ರಾಯರು ಆಶೀರ್ವದಿಸಲಿ ಎಂದರು.

ಈ ಸಂದರ್ಭದಲ್ಲಿ ಬ್ರಹ್ಮವೃಂದದ ಅಧ್ಯಕ್ಷ ಗೋಪಾಲ ಪಡ್ನಿಸ್, ವ್ಹಿ.ಎಲ್. ಪೂಜಾರ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಚಂಬಣ್ಣ ಬಾಳಿಕಾಯಿ, ಮಹೇಶ ಹೊಗೆಸೊಪ್ಪಿನ, ಜಯಕ್ಕ ಕಳ್ಳಿ, ಶರಣು ಗೋಡಿ, ಸುನೀಲ ಮಹಾಂತಶೆಟ್ಟರ, ನಿಂಗಪ್ಪ ಬನ್ನಿ, ನೀಲಪ್ಪ ಕರ್ಜೆಕಣ್ಣವರ, ಮಂಜುನಾಥ ಮಾಗಡಿ, ನಾಗರಾಜ ಚಿಂಚಲಿ, ಶಂಕರ ಬೆಟಗೇರಿ, ಕೆ.ಎಸ್. ಕುಲಕರ್ಣಿ, ಎ.ಪಿ. ಕುಲಕರ್ಣಿ, ವೆಂಕಟೇಶ ಗುಡಿ, ಗುರುರಾಜ ಪಾಟೀಲಕುಲಕರ್ಣಿ, ವೇದವ್ಯಾಸ ಹೊಂಬಳ, ಅರವಿಂದ ದೇಶಪಾಂಡೆ, ಮನೋಜ ಹೊಂಬಳ, ಅನಿಲ ಕುಲಕರ್ಣಿ, ಬಾಬು ಅಳವಂಡಿ, ಶ್ರೀಪಾದರಾಜ ಹೊಂಬಳ, ಗುರುರಾಜ ಸುಳ್ಳದ, ಪ್ರಾಣೇಶ ಬೆಳ್ಳಟ್ಟಿ, ಶಿವು ಮಾನ್ವಿ, ರಾಮು ಪೂಜಾರ, ರಾಘವೇಂದ್ರ ಗೊಗ್ಗಿ, ವೆಂಕಟೇಶ ಕಳ್ಳಿಮನಿ, ಕೃಷ್ಣಕುಮಾರ ಕುಲಕರ್ಣಿ, ಬಿ.ಕೆ. ಕುಲಕರ್ಣಿ, ಶ್ರೀನಿವಾಸ ಹುಲಮನಿ, ಶ್ರೀಕಾಂತ ಪೂಜಾರ, ಡಾ. ಪ್ರಸನ್ನ ಕುಲಕರ್ಣಿ, ಸೋಮನಾಥ ಪೂಜಾರ, ಮಂಜುನಾಥ ಒಂಟಿ, ಗಂಗಾಧರ ಗೋಡಿ, ರಮೇಶ ತೊರಗಲ್, ದೃವ ಬೆಟಗೇರಿ, ಕಿರಣ ನವಲೆ, ರವೀಂದ್ರ ರಾಯಚೂರ, ಗಂಗಾಧರ ಹಳ್ಳಿಕೇರಿ, ರಾಘವೇಂದ್ರ ಮಿಸ್ಕಿನ್ ಮುಂತಾದವರು ಪಾಲ್ಗೊಂಡಿದ್ದರು.

ಮೊದಲ ದಿನವಾದ ರವಿವಾರದಿಂದಲೇ ನೂರಾರು ಜನರು ಶ್ರೀಮಠಕ್ಕೆ ಆಗಮಿಸಿ ರಾಯರ ದರ್ಶನವನ್ನು ಪಡೆದರು. ಹೊಂಬಳ ಮನೆತನದವರಿಂದ ಪೂಜಿಸ್ಪಡುತ್ತಿರುವ ಈ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆರಾಧನೆ ಕಾರ್ಯಕ್ರಮವು ವರ್ಷದಿಂದ ವರ್ಷಕ್ಕೆ ವೈಭವಯುತವಾಗಿ ನಡೆಯುತ್ತಿದ್ದು, ಕೊನೆಯ ದಿನವಾದ ಮಂಗಳವಾರ ವಿವಿಧ ಪುಷ್ಪಗಳಿಂದ ಅಲಂಕರಿಸಿದ ರಾಯರ ವೃಂದಾವನವನ್ನು ವೀಕ್ಷಿಸಿದ ಭಕ್ತರು ಕಣ್ತುಂಬಿಕೊಂಡರು.


Spread the love

LEAVE A REPLY

Please enter your comment!
Please enter your name here