ಬೆಂಗಳೂರು: ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ ಭೂಮಿ ವಾಪಸ್ ನೀಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಭೂಮಿ ಹಂಚಿಕೆಯಾಗಿದ್ದಕ್ಕೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು. ಸುಮ್ಮನೆ ಏಕೆ ಗೊಂದಲ ಎಂದು ಭೂಮಿ ವಾಪಸ್ ಕೊಟ್ಟಿದ್ದಾರೆ ಎಂದರು.
ಇನ್ನೂ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ವಿಚಾರವಾಗಿ ಟೀಕಿಸುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಕಾಣುವುದೆಲ್ಲವೂ ಹಳದಿ. ಬಿಜೆಪಿಯವರಿಗೆ ಗ್ರೀನ್ ಕಾಣಲ್ಲ, ಬ್ಲ್ಯೂನೂ ಕಾಣುವುದಿಲ್ಲ. ಎಲ್ಲದರಲ್ಲೂ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.



