ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಪ್ರಸ್ತುತ 1–1ರಿಂದ ಸಮಬಲಗೊಂಡಿದೆ. ರಾಂಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ 17 ರನ್‌ಗಳಿಂದ ಗೆದ್ದರೆ, ರಾಯ್‌ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 4 ವಿಕೆಟ್‌ಗಳಿಂದ ಗೆಲುವು ಸಾಧಿಸಿತು.
ಹೀಗಾಗಿ ಇಂದು ನಡೆಯಲಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವೇ ಸರಣಿಯ ಗೆಲುವಿಗೆ ತೀರ್ಮಾನಕಾರಿ. ಯಾವ ತಂಡ ಈ ಪಂದ್ಯವನ್ನು ಗೆದ್ದರೂ, ಅದು ಟ್ರೋಫಿಯನ್ನು ಎತ್ತಿಹಿಡಿಯಲಿದೆ. ಟೆಸ್ಟ್ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಟೀಂ ಇಂಡಿಯಾ ಪೂರಕ ಸಿದ್ಧತೆಯಲ್ಲಿ ಮೈದಾನಕ್ಕಿಳಿಯಲಿದೆ.
ಪಂದ್ಯದ ಸ್ಥಳ ಮತ್ತು ಸಮಯ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಇಂದು ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ–ವಿಡಿಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 1:00 ಗಂಟೆಗೆ ಆರಂಭವಾಗಲಿದ್ದು, ಟಾಸ್ 12:30ಕ್ಕೆ ನಡೆಯಲಿದೆ.
ನೇರ ಪ್ರಸಾರ
ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಆನ್‌ಲೈನ್‌ನಲ್ಲಿ ಅಭಿಮಾನಿಗಳು ಜಿಯೋ–ಹಾಟ್‌ಸ್ಟಾರ್ ಅಪ್ಲಿಕೇಶನ್ ಹಾಗೂ ವೆಬ್‌ಸೈಟ್ ಮೂಲಕ ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ
ಕೆಎಲ್ ರಾಹುಲ್ (ನಾಯಕ/ವಿಕೆಟ್‌ಕೀಪರ್), ರಿಷಭ್ ಪಂತ್ (ಉಪನಾಯಕ/ವಿಕೆಟ್‌ಕೀಪರ್), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಧ್ರುವ ಜುರೆಲ್, ಅರ್ಶ್ದೀಪ್ ಸಿಂಗ್.
ದಕ್ಷಿಣ ಆಫ್ರಿಕಾ ತಂಡ
ಟೆಂಬಾ ಬವುಮಾ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಜ್‌ಕೆ, ಡೆವಾಲ್ಡ್ ಬ್ರೂಯಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್ಗಿಡಿ, ರಿಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಾಯೆನ್.


